ಪೆರ್ಲ: ಬಜಕೂಡ್ಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಅಂಗವಾಗಿ ರಥೋತ್ಸವ ಮತ್ತು ಆಕರ್ಷಕ ಸುಡುಮದ್ದು ಪ್ರದರ್ಶನ ಗುರುವಾರ ಜರುಗಿತು. ಬ್ರಹ್ಮಶ್ರೀ ದೇಲಂಪಾಡಿ ಅಅನಿರುದ್ಧ ತಂತ್ರಿಗಳ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.17ರಂದು ಬೆಳಗ್ಗೆ ಅಯ್ಯಂಗಾಯಿ ದರ್ಶನ ಬಲಿ, ನವಕಾಭಿಷೇಕ, ರಾತ್ರಿ ಶ್ರೀಭೂತಬಲಿ, ಕಟ್ಟೆಪೂಜೆ, ದರ್ಶನಬಲಿ, ನಡೆಯಿತು. 19ರಂದು ಶ್ರೀ ಪಿಲಿಚಾಮುಂಡಿ ದೈವದ ನೇಮ ನಡೆಯುವುದು.