ನವದೆಹಲಿ: ಪೆಲೆಸ್ತೀನ್'ನಲ್ಲಿ ಭಾರತದ ರಾಯಭಾರಿಯಾಗಿರುವ ಮುಕುಲ್ ಆರ್ಯ ಅವರ ಮೃತದೇಹ ಭಾನುವಾರ ರಾಮಲ್ಹಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ಪತ್ತೆಯಾಗಿದೆ.
ಪ್ಯಾಲೆಸ್ಟೇನ್ನಲ್ಲಿರುವ ಭಾರತೀಯ ರಾಯಭಾರಿಯ ನಿಧನಕ್ಕೆ ವಿದೇಶಾಂಗ ಸಚಿವ ಡಾ.ಎಸ್ ಜೈಶಂಕರ್ ಟ್ವೀಟ್ ಮಾಡುವ ಮೂಲಕ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಮುಕುಲ್ ಆರ್ಯ ಸಾವಿನ ಕಾರಣಗಳ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ. 2008ರ ಬ್ಯಾಚ್‌ನ ಭಾರತೀಯ ವಿದೇಶಾಂಗ ಸೇವೆಯ ಅಧಿಕಾರಿಯಾಗಿರುವ ಆರ್ಯ, ಈ ಮೊದಲು ಕಾಬೂಲ್ ಮತ್ತು ಮಾಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿಗಳಲ್ಲಿ ಕೆಲಸ ಮಾಡಿದ್ದರು.