HEALTH TIPS

ಪಂಜಾಬ್ ಚುನಾವಣೆ: ಹಾಲಿ ಸಿಎಂ ಚನ್ನಿ, ಮಾಜಿ ಸಿಎಂ ಅಮರೀಂದರ್ ಸಿಂಗ್, ಸಿಧುಗೆ ಹಿನ್ನಡೆ

    ಅಮೃತಸರ: ಪಂಜಾಬ್ ವಿಧಾನಸಭೆ ಚುನಾವಣಾ ಫಲಿತಾಂಶಗಳು ಪ್ರಕಟವಾಗುತ್ತಿದ್ದು, ಹಾಲಿ ಸಿಎಂ ಚರಣ್ ಜಿತ್ ಚನ್ನಿ ಹಾಗೂ ಮಾಜಿ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ತಮ್ಮದೇ ಕ್ಷೇತ್ರದಲ್ಲಿ ಹಿನ್ನಡೆ ಅನುಭವಿಸಿದ್ದಾರೆ ಎನ್ನಲಾಗಿದೆ.

     ಫಲಿತಾಂಶದ ಆರಂಭಿಕ ಟ್ರೆಂಡ್‌ಗಳಲ್ಲಿ ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಮತ್ತು ಪಂಜಾಬ್ ಲೋಕ ಕಾಂಗ್ರೆಸ್ ನಾಯಕ ಅಮರಿಂದರ್ ಸಿಂಗ್ ಕ್ರಮವಾಗಿ ಚಮಕೂರ್ ಸಾಹಿಬ್, ಅಮೃತಸರ ಪೂರ್ವ ಮತ್ತು ಪಾಟಿಯಾಲ ಕ್ಷೇತ್ರಗಳಲ್ಲಿ ಹಿನ್ನಡೆ ಅನುಭವಿಸಿದ್ದಾರೆ.

     ಭಾರತದ ಚುನಾವಣಾ ಆಯೋಗದ ಪ್ರಕಾರ, ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಚರಂಜಿತ್ ಸಿಂಗ್ 8785 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ ಮತ್ತು ಕಾಂಗ್ರೆಸ್ ಅಭ್ಯರ್ಥಿ ಮತ್ತು ಹಾಲಿ ಸಿಎಂ ಚರಂಜಿತ್ ಸಿಂಗ್ ಚನ್ನಿ ಅವರು 6852 ಮತಗಳನ್ನು ಚಮಕೌರ್ ಸಾಹಿಬ್ ಕ್ಷೇತ್ರದಲ್ಲಿ ಹಿನ್ನಡೆ ಪಡೆದಿದ್ದಾರೆ.

      ಅಂತೆಯೇ ಭದೌರ್ ಕ್ಷೇತ್ರದಲ್ಲೂ ಚನ್ನಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಲಾಭ್ ಸಿಂಗ್ ಉಗೋಕೆಗಿಂತ ಹಿಂದೆ ಬಿದ್ದಿದ್ದಾರೆ. ಇನ್ನು ಅಮೃತಸರ ಪೂರ್ವ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಜೀವನ್ ಜ್ಯೋತ್ ಕೌರ್ 3058 ಮತಗಳಿಂದ ಮುನ್ನಡೆಯಲ್ಲಿದ್ದರೆ, ಶಿರೋಮಣಿ ಅಕಾಲಿದಳದ ಅಭ್ಯರ್ಥಿ ಬಿಕ್ರಮ್ ಸಿಂಗ್ ಮಜಿಥಿಯಾ (2468 ಮತಗಳು)  ಮತ್ತು ಕಾಂಗ್ರೆಸ್ ನ ನವಜೋತ್ ಸಿಂಗ್ ಸಿಧು (2091 ಮತಗಳು) ಹಿನ್ನಡೆಯಲ್ಲಿದ್ದಾರೆ.

        ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ಪಟಿಯಾಲಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷದ ಅಜಿತ್ ಪಾಲ್ ಸಿಂಗ್ ಕೊಹ್ಲಿ 12,693 ಮತಗಳೊಂದಿಗೆ ಮುನ್ನಡೆಯಲ್ಲಿದ್ದು, ಮತ್ತು ಸಿಂಗ್ 4926 ಮತಗಳನ್ನು ಗಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries