ಹೀಗಾಗಿ ಐದು ರಾಜ್ಯಗಳ ಫಲಿತಾಂಶವನ್ನು ಎಲ್ಲ ಪಕ್ಷಗಳು ಉಸಿರುಬಿಗಿಹಿಡಿದು ಕಾಯುತ್ತಿವೆ. ಉತ್ತರ ಪ್ರದೇಶ, ಗೋವಾ, ಪಂಜಾಬ್, ಉತ್ತರಾಖಂಡ ಹಾಗೂ ಮಣಿಪುರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಗುರುವಾರ ಬೆಳಿಗ್ಗೆ 8ರಿಂದ ಆರಂಭವಾಗಲಿದೆ. ಮತ ಎಣಿಕೆ ಆರಂಭವಾದ ಒಂದೆರಡು ಗಂಟೆಗಳಲ್ಲಿ ಚಿತ್ರಣ ಲಭ್ಯವಾಗುವ ನಿರೀಕ್ಷೆಯಿದೆ. ಮತ ಎಣಿಕೆಗೆ ಚುನಾವಣಾ ಆಯೋಗವು ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ.
ಪಂಚರಾಜ್ಯ ಚುನಾವಣೆ ಫಲಿತಾಂಶ: ಪಂಜಾಬ್‌ನಲ್ಲಿ ಮ್ಯಾಜಿಕ್ ಸಂಖ್ಯೆಯ ಸನಿಹಕ್ಕೆ ಎಎಪಿ
0
ಮಾರ್ಚ್ 10, 2022
ನವದೆಹಲಿ : ಇಂದು ನಡೆಯುತ್ತಿರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆಯು 690 ಕ್ಷೇತ್ರಗಳ 6,944 ಅಭ್ಯರ್ಥಿಗಳ ಹಣೆಬರಹವನ್ನು ಮಾತ್ರ ಬರೆಯುವುದಿಲ್ಲ. ಇದು 2024ರ ಸಾರ್ವತ್ರಿಕ ಚುನಾವಣೆಗೆ ತೆಗೆದುಕೊಳ್ಳಬೇಕಾದ ರಾಜಕೀಯ ತೀರ್ಮಾನಗಳನ್ನೂ ನಿರ್ಧರಿಸುತ್ತದೆ.
Tags