ಸಮರಸ ಚಿತ್ರಸುದ್ದಿ: ಮಧೂರು: ಇತಿಹಾಸ ಪ್ರಸಿದ್ಧವಾದ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಾಲಯಕ್ಕೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ.ಸೋಮಶೇಖರ್ ಭೇಟಿ ನೀಡಿ ಕ್ಷೇತ್ರದ ನವೀಕರಣ ಕಾಮಗಾರಿಯನ್ನು ವೀಕ್ಷಿಸಿದರು. ಈ ಸಂದಭರ್Àದಲ್ಲಿ ನವೀಕರಣ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯದೇವ ಖಂಡಿಗೆ, ಕೋಶಾಧಿಕಾರಿ ಮಂಜುನಾಥ ಕಾಮತ್, ಕಾರ್ಯದರ್ಶಿ ಮುರಳಿ ಗಟ್ಟಿ, ಮಧೂರು ಪಂಚಾಯತಿ ಮಾಜಿ ಅಧ್ಯಕ್ಷ ಮಾಧವ ಮಾಸ್ತರ್, ಕ್ಷೇತ್ರ ಸಂರಕ್ಷಣಾ ಸಮಿತಿಯ ಅಪ್ಪಯ್ಯ ನಾೈಕ್, ಎ.ಮನೋಹರ, ಕನ್ನಡ ಭವನದ ಸ್ಥಾಪಕಾಧ್ಯಕ್ಷ ವಾಮನ್ ರಾವ್ ಬೇಕಲ್, ಸಂಧ್ಯಾರಾಣಿ ಟೀಚರ್ ಮೊದಲಾದವರು ಉಪಸ್ಥಿತರಿದ್ದರು.