ಕೊಚ್ಚಿ: ಬಸ್ ಪ್ರಯಾಣ ದರ ಏರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿರುವ ಖಾಸಗಿ ಬಸ್ ಮಾಲೀಕರು ಇದಕ್ಕೂ ಮೊದಲು ಸಾರಿಗೆ ಸಚಿವ ಆಂಟನಿ ರಾಜು ಅವರಿಗೆ ಮುಷ್ಕರ ನೋಟಿಸ್ ನೀಡಿದ್ದಾರೆ. ಕೂಡಲೇ ಶುಲ್ಕ ಹೆಚ್ಚಿಸದಿದ್ದರೆ ಮುಷ್ಕರ ನಡೆಸುವುದಾಗಿ ಬಸ್ ಮಾಲೀಕರು ಸ್ಪಷ್ಟಪಡಿಸಿದ್ದಾರೆ.
ಬಸ್ ಪ್ರಯಾಣ ದರ ಏರಿಕೆ ಮಾಡುವುದಾಗಿ ಭರವಸೆ ನೀಡಿ ನಾಲ್ಕು ತಿಂಗಳಾದರೂ ಜಾರಿಯಾಗದ ಹಿನ್ನೆಲೆಯಲ್ಲಿ ನಿನ್ನೆ ಮುಷ್ಕರ ನಡೆಸುವುದಾಗಿ ಘೋಷಿಸಲಾಗಿತ್ತು. ಮಾ.30ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಮಾಲೀಕರು ನಿರ್ಧರಿಸಿದ್ದಾರೆ.
ಕನಿಷ್ಠ ಶುಲ್ಕವನ್ನು 12 ರೂ.ಗೆ ಹೆಚ್ಚಿಸಬೇಕು ಮತ್ತು ವಿದ್ಯಾರ್ಥಿಗಳ ರೀಯಾಯ್ತಿ ಶುಲ್ಕವನ್ನು ಹೆಚ್ಚಿಸಬೇಕು ಎಂಬುದು ಬಸ್ ಮಾಲೀಕರ ಆಗ್ರಹವಾಗಿದೆ. ಬಜೆಟ್‍ನಲ್ಲಿ ದರ ಏರಿಕೆ ಮಾಡಿಲ್ಲ. ಬಸ್ ಮಾಲೀಕರ ಬೇಡಿಕೆ ನ್ಯಾಯಯುತವಾಗಿದ್ದು, ಸಾರ್ವಜನಿಕರ ಅಭಿಪ್ರಾಯ ಪಡೆದು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಆಂಟನಿ ರಾಜು ನಿನ್ನೆ ಹೇಳಿದ್ದರು. ಇದರ ಬೆನ್ನಲ್ಲೇ ನೋಟಿಸ್ ಜಾರಿ ಮಾಡಲಾಗಿದೆ.