ಮುಂಬೈ: ಐಪಿಎಲ್ 2022 ಸೀಸನ್ ಪ್ರಾರಂಭವಾಗುವ ಒಂದು ದಿನದ ಮೊದಲು ಬಿಸಿಸಿಐ ನಿಂದ ಮಹಿಳಾ ಕ್ರಿಕೆಟ್‌ಗೆ ಸಂಬಂಧಿಸಿದಂತೆ ಶುಭ ಸುದ್ದಿಯೊಂದು ಹೊರ ಬಂದಿದೆ.
ಆರು ತಂಡಗಳನ್ನೊಳಗೊಂಡ ಮಹಿಳಾ ಐಪಿಎಲ್ ಮುಂದಿನ ವರ್ಷದಿಂದ ಪುರುಷರ ಐಪಿಎಲ್‌ನಂತೆಯೇ ನಡೆಯಲಿದೆ ಎಂದು ಬಿಸಿಸಿಐ ಬಾಸ್ ಸೌರವ್ ಗಂಗೂಲಿ ಇಂದು ಘೋಷಿಸಿದ್ದಾರೆ.
ಮುಂಬೈನಲ್ಲಿ ನಡೆದ ಐಪಿಎಲ್ ಆಡಳಿತ ಮಂಡಳಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇತ್ತೀಚಿನ ದಿನಗಳಲ್ಲಿ ಮಹಿಳಾ ಐಪಿಎಲ್ ಗೆ ಭಾರೀ ಬೇಡಿಕೆ ಬಂದಿರುವ ಹಿನ್ನೆಲೆಯಲ್ಲಿ ಬಿಸಿಸಿಐ ಈ ನಿರ್ಧಾರ ಕೈಗೊಂಡಿದೆ ಎಂದು ಸೌರವ್ ಗಂಗೂಲಿ ತಿಳಿಸಿದ್ದಾರೆ.