ನವದೆಹಲಿ: ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಹುದ್ದೆಗೆ ಹಿರಿಯ ವಕೀಲ ಅಮನ್ ಲೇಖಿ ಅವರು ಶುಕ್ರವಾರ ರಾಜೀನಾಮೆ ನೀಡಿದ್ದಾರೆ.
ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆ ಸಚಿವ ಕಿರಣ್ ರಿಜಿಜು ಅವರಿಗೆ ಬರೆದ ಎರಡು ಸಾಲಿನ ರಾಜೀನಾಮೆ ಪತ್ರದಲ್ಲಿ ಲೇಖಿ ಅವರು, ಸುಪ್ರೀಂ ಕೋರ್ಟ್‌ನ ಹೆಚ್ಚುವರಿ ಸಾಲಿಸಿಟರ್ ಜನರಲ್ ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.
ಲೇಖಿ ಅವರು ರಾಜೀನಾಮೆಗೆ ಯಾವುದೇ ನಿರ್ದಿಷ್ಟ ಕಾರಣವನ್ನು ನೀಡಿಲ್ಲ.
ಲೇಖಿ ಅವರನ್ನು ಮಾರ್ಚ್, 2018 ರಲ್ಲಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಹುದ್ದೆಗೆ ನೇಮಿಸಲಾಯಿತು ಮತ್ತು ಜೂನ್ 30, 2023 ರವರೆಗೆ ಮೂರು ವರ್ಷಗಳ ಅವಧಿಗೆ ಜುಲೈ 1, 2020 ರಂದು ಮರು ನೇಮಕ ಮಾಡಲಾಗಿತ್ತು.
ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣ ಮತ್ತು 2ಜಿ ತರಂಗಾಂತರ ಹಂಚಿಕೆ ಹಗರಣ ಸೇರಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಹಾಗೂ ವಿವಿಧ ಹೈಕೋರ್ಟ್‌ಗಳಲ್ಲಿ ವಿವಿಧ ಪ್ರಮುಖ ಕ್ರಿಮಿನಲ್ ಪ್ರಕರಣಗಳಲ್ಲಿ ಅವರು ವಾದ ಮಂಡಿಸಿದ್ದರು.