ಕೊಚ್ಚಿ: ತಂದೆಯಿಂದ ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾಗಿದ್ದ 10 ವರ್ಷದ ಬಾಲಕಿಗೆ ಗರ್ಭಪಾತಕ್ಕೆ ಅವಕಾಶ ಕಲ್ಪಿಸಲಾಗಿದೆ. ಅಂತರಾಷ್ಟ್ರೀಯ ಮಹಿಳಾ ದಿನದಂದು ಬಾಲಕಿಯ ತಾಯಿ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಗರ್ಭಪಾತ ಮಾಡದಿದ್ದರೆ ಬಾಲಕಿಯ ಜೀವಕ್ಕೆ ಅಪಾಯವಿದೆ ಎಂಬ ವೈದ್ಯಕೀಯ ವರದಿ ಆಧರಿಸಿ ಹೈಕೋರ್ಟ್ ಅನುಮತಿ ನೀಡಿದೆ.
ಗರ್ಭಿಣಿಯರು ಗರ್ಭಧರಿಸಿದ 24 ವಾರಗಳಲ್ಲಿ ಹೆರಲು ಬಯಸದಿದ್ದರೆ ಗರ್ಭಪಾತ ಮಾಡಿಸಿಕೊಳ್ಳಲು ಅವಕಾಶ ನೀಡುವ ಕಾನೂನು ಇದೆ. ಆದರೆ ಸಂತ್ರಸ್ತೆಯ ವೈದ್ಯಕೀಯ ವರದಿಯಲ್ಲಿ ಆಕೆ ಈಗ 31 ವಾರಗಳ ಗರ್ಭಿಣಿ ಎಂದು ಹೇಳಲಾಗಿದೆ. ಹೀಗಾಗಿ ಈ ನಿಯಮ ಅನ್ವಯವಾಗುವುದಿಲ್ಲ ಈ ಪ್ರಕರಣದಲ್ಲಿ ಬಾಲಕಿಯ ತಾಯಿ ಹೈಕೋರ್ಟ್ ಮೆಟ್ಟಿಲೇರಿದ್ದರು.
ಆರೋಗ್ಯ ತಜ್ಞರ ಪ್ರಕಾರ, ಈ ವಯಸ್ಸಿನಲ್ಲಿ ಹೆಣ್ಣು ಮಗು ಜನ್ಮ ನೀಡುವುದು ಮಗುವಿನ ಮಾನಸಿಕ ಮತ್ತು ದೈಹಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಇದನ್ನೂ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಬಾಲಕಿಯ ಭವಿಷ್ಯವನ್ನು ಕಾಪಾಡುವುದು ಅಗತ್ಯ ಎಂದು ಮನವಿಯಲ್ಲಿ ತಿಳಿಸಲಾಗಿದೆ.