ಕುಂಬಳೆ: ಗಡಿನಾಡು ಕಾಸರಗೋಡು ಕೇರಳದಲ್ಲಿದ್ದರೂ ಭಾÁವನಾತ್ಮಕವಾಗಿ ಕರ್ನಾಟಕದಲ್ಲೇ ಇದೆ. ಈ ಪ್ರದೇಶದಲ್ಲಿ ಆತ್ಮ ವಿಶ್ವಾಸವನ್ನು ಹೆಚ್ಚಿಸುವ ಮೂಲಕ ಕನ್ನಡವನ್ನು ಗಟ್ಟಿಗೊಳಿಸುವ ಕಾರ್ಯ ನಡೆಯಬೇಕಾಗಿದೆ. ಕನ್ನಡ ಭಾಷೆ, ಸಂಸ್ಕøತಿಯನ್ನು ಉಳಿಸಿ ಬೆಳೆಸಲು ಹೃದಯದಲ್ಲಿ ಕನ್ನಡದ ದೀಪವನ್ನು ಹಚ್ಚಬೇಕು ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ.ಸೋಮಶೇಖರ್ ಹೇಳಿದರು.
ಸಾಮಾಜಿಕ ಸಾಂಸ್ಕøತಿಕ ಸಂಸ್ಥೆಯಾದ ರಂಗಚಿನ್ನಾರಿ ಕಾಸರಗೋಡು ನೇತೃತ್ವದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ಭಾರತ್ ಸ್ವಾತಂತ್ರ್ಯ ಅಮೃತೋತ್ಸವದ ಸವಿನೆನಪು ಕಾರ್ಯಕ್ರಮದ ಅಂಗವಾಗಿ ಶನಿವಾರ ಬೆಳಿಗ್ಗೆ ನಾರಾಯಣಮಂಗಲ ಎಎಲ್‍ಪಿ ಶಾಲೆಯಲ್ಲಿ ಆಯೋಜಿಸಿದ ಕನ್ನಡ ಸಾಹಿತ್ಯ ಸಮ್ಮಿಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾಸರಗೋಡಿನಲ್ಲಿ ಕನ್ನಡ ಹೋರಾಟಗಾರ ಡಾ.ಕಯ್ಯಾರ ಕಿಞ್ಞಣ್ಣ ರೈ ಅವರ ಸವಿನೆನಪಿಗಾಗಿ ಕನ್ನಡ ಭವನವನ್ನು ನಿರ್ಮಿಸಲು ಕರ್ನಾಟಕ ಸರಕಾರ ಬಜೆಟ್‍ನಲ್ಲಿ ಒಂದು ಕೋಟಿ ರೂ. ಮೀಸಲಿರಿಸಿದೆ ಎಂದರು.
ವಿವಿಧ ಕನ್ನಡ ಪರ ಸಂಘಟನೆಗಳು ನಿರಂತರವಾಗಿ ಕನ್ನಡ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಕಾಸರಗೋಡಿನಲ್ಲಿ ಕನ್ನಡ ಭಾಷೆ, ಸಂಸ್ಕøತಿಯನ್ನು ಉಳಿಸಿ ಬೆಳೆಸುವ ಕೈಂಕರ್ಯ ನಡೆಸುತ್ತಿದೆ. ಕಾಸರಗೋಡಿನ ಸಾಧಕರಿಗೆ ಕರ್ನಾಟಕ ಸರಕಾರ ರಾಜ್ಯೋತ್ಸವ ಪ್ರಶಸ್ತಿ, ವಿವಿಧ ಅಕಾಡೆಮಿಗಳಲ್ಲಿ ಪ್ರಾತಿನಿಧ್ಯ ನೀಡಬೇಕೆಂದು ಆಶೀರ್ವಚನ ನೀಡಿದ ಎಡನೀರು ಮಠಾ„ೀಶ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಹೇಳಿದರು.
ಕನÀ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡು ಘಟಕ ಅಧ್ಯಕ್ಷ ಎಸ್.ವಿ.ಭÀಟ್ ಅಧ್ಯಕ್ಷತೆ ವಹಿಸಿದರು. ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕøತ ಸಾಹಿತಿ ಡಾ.ನಾ.ದಾಮೋದರ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಕುಂಬಳೆ ಗ್ರಾಮ ಪಂಚಾಯತ್ ಸದಸ್ಯೆ ಪಿ.ಸುಲೋಚನ, ಕರ್ನಾಟಕ ಸಮಿತಿ ಅಧ್ಯಕ್ಷ ಮುರಳೀಧರ ಬಳ್ಳಕ್ಕುರಾಯ ಶುಭಹಾರೈಸಿದರು. ಕಾಸರಗೋಡು ಚಿನ್ನಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.