HEALTH TIPS

ಭಾರತದ ಎಷ್ಟು ವಿದ್ಯಾರ್ಥಿಗಳು ವಿಶ್ವದ ಯಾವ್ಯಾವ ದೇಶಗಳಲ್ಲಿ ಓದುತ್ತಿದ್ದಾರೆ?

                  ರಷ್ಯಾ (Russia) ಮತ್ತು ಉಕ್ರೇನ್ (Ukraine) ಪಡೆಗಳ ನಡುವಿನ ಯುದ್ಧ (War) ಶುರುವಾದಾಗಿನಿಂದ ಅಲ್ಲಿರುವ ವಿದ್ಯಾರ್ಥಿಗಳ (Students) ಬಗ್ಗೆ ಹೆಚ್ಚಿನ ಚರ್ಚೆ ಆಗುತ್ತಿದೆ. ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 14,000 ಭಾರತೀಯರು (Indians) ಇನ್ನೂ ಯುದ್ಧ ಪೀಡಿತ ದೇಶವಾದ ಉಕ್ರೇನ್​ನಲ್ಲಿ ಸಿಲುಕಿಕೊಂಡಿದ್ದಾರೆ. ಇದರ ನಡುವೆ ಉಕ್ರೇನ್ ನಲ್ಲಿ ಇರುವ ವಿದ್ಯಾರ್ಥಿಗಳ ಸಂಖ್ಯೆಯನ್ನು ಗಮನಿಸಿದಾಗ ನಮ್ಮ ದೇಶದಲ್ಲಿ ಶಿಕ್ಷಣಿಕ (Education) ವಿದ್ಯಾಭ್ಯಾಸ ಚೆನ್ನಾಗಿ ಇದ್ದರು ನಮ್ಮ ದೇಶದ ವಿದ್ಯಾರ್ಥಿಗಳು ಯಾಕೆ ಹೊರದೇಶಕ್ಕೆ ಹೋಗಿ ಓದುತ್ತಿದ್ದಾರೆ.. ಮತ್ತು ಯಾವ ದೇಶವನ್ನು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಶಿಕ್ಷಣಕ್ಕೆ ಆಯ್ಕೆ ಮಾಡಿಕೊಂಡಿದ್ದಾರೆ ಎಂದು..

                        ವಿದೇಶದಲ್ಲಿ ಇದ್ದಾರೆ ಹೆಚ್ಚಿನ ಸಂಖ್ಯೆಯ ಭಾರತೀಯ ವಿದ್ಯಾರ್ಥಿಗಳು
         ಪ್ರತಿಯೊಬ್ಬ ಪೋಷಕರಿಗೂ ಹಾಗೂ ವಿದ್ಯಾರ್ಥಿಗಳಿಗೆ ಹೊರದೇಶಕ್ಕೆ ಹೋಗಿ ವಿದ್ಯಾಭ್ಯಾಸ ಮಾಡಬೇಕು ಎಂಬ ಬಯಕೆ ಇದ್ದೇ ಇರುತ್ತದೆ.. ಶ್ರೀಮಂತರು ಮತ್ತು ಸಿನಿಮಾ ತಾರೆಯರು ಕ್ರೀಡಾಪಟುಗಳು ತಮ್ಮ ಮಕ್ಕಳ ಪ್ರಾಥಮಿಕ ಶಿಕ್ಷಣದಿಂದ ಹಿಡಿದು ಉನ್ನತ ಶಿಕ್ಷಣದವರೆಗೆ ವಿದೇಶಿ ಶಾಲಾ-ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಆಗುವಂತೆ ನೋಡಿಕೊಳ್ಳುತ್ತಾರೆ.. ಮಧ್ಯಮವರ್ಗ ಹಾಗೂ ಬಡವರ ಮಕ್ಕಳು ಕಷ್ಟಪಟ್ಟು ಓದಿ ಸ್ಕಾಲರ್ಶಿಪ್ ಪಡೆದು ವಿದೇಶಗಳಿಗೆ ಹೋಗಿ ವಿದ್ಯಾಭ್ಯಾಸ ಮಾಡುವ ಕನಸನ್ನು ನನಸು ಮಾಡಿಕೊಳ್ಳುತ್ತಾರೆ.

                         ಪೋಷಕರಿಗೆ ಮಕ್ಕಳನ್ನು ವಿದೇಶದಲ್ಲಿ ಓದಿಸುವ ಕನಸು

       ಇನ್ನು ಕೆಲವು ಪೋಷಕರು ಎಷ್ಟು ಕಷ್ಟವಾದರೂ ಸರಿ ತಮ್ಮ ಮಕ್ಕಳನ್ನು ಚೆನ್ನಾಗಿ ಓದಿಸಬೇಕು ಎಂಬ ಹಂಬಲದಿಂದ ಸಾಲಸೋಲ ಮಾಡಿ ವಿದೇಶಿ ಶಾಲಾ-ಕಾಲೇಜುಗಳಿಗೆ ಸೇರಿಸುತ್ತಾರೆ..
               ಕೆಲವೆಡೆ ಕಡಿಮೆ ವೆಚ್ಚದಲ್ಲಿ ಉತ್ತಮ ಶಿಕ್ಷಣ

                 ಒಂದು ಕಡೆ ವಿದೇಶದ ಸಾವಿರಾರು ಸಂಖ್ಯೆಯ ವಿದ್ಯಾರ್ಥಿಗಳು ಭಾರತಕ್ಕೆ ಬಂದು ಅಭ್ಯಾಸ ಮಾಡುತ್ತಿದ್ರೆ, ಭಾರತೀಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ವಿದೇಶಕ್ಕೆ ಹೋಗಿ ಅಭ್ಯಾಸ ಮಾಡುತ್ತಿದ್ದಾರೆ.. ಯಾಕಂದ್ರೆ ಭಾರತಕ್ಕೆ ಹೋಲಿಸಿದರೆ ಕೆಲವು ರಾಷ್ಟ್ರಗಳಲ್ಲಿ ಇನ್ನೂ ಉತ್ತಮವಾದ ಶಿಕ್ಷಣ ಹಾಗೂ ಶೈಕ್ಷಣಿಕ ವೆಚ್ಚ ಕಡಿಮೆ ಇರುವುದರಿಂದ ವಿದ್ಯಾರ್ಥಿಗಳು ವಿದೇಶಿ ಶಿಕ್ಷಣವನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ.. ಹಾಗಿದ್ರೆ ಭಾರತೀಯ ವಿದ್ಯಾರ್ಥಿಗಳು ಯಾವ ಯಾವ ರಾಷ್ಟ್ರಗಳಲ್ಲಿ ಹೆಚ್ಚು ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಎನ್ನುವ ಮಾಹಿತಿ ಇಲ್ಲಿದೆ.

                     ವಿದೇಶದಲ್ಲಿ 7 ಲಕ್ಷಕ್ಕೂ ಅಧಿಕ ಭಾರತೀಯ ವಿದ್ಯಾರ್ಥಿಗಳು

          ಒಂದಲ್ಲ ಎರಡಲ್ಲ ಬರೋಬ್ಬರಿ ಏಳು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಅಮೆರಿಕ ಆಸ್ಟ್ರೇಲಿಯಾ ಕೆನಡಾ ಯುರೋಪ್ ಸೇರಿ ಹಲವು ರಾಷ್ಟ್ರಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.. 2016ರಲ್ಲಿ ಸುಮಾರು 4.40 ಲಕ್ಷದಷ್ಟು ಜನ ಭಾರತೀಯ ವಿದ್ಯಾರ್ಥಿಗಳು ವಿವಿಧ ರಾಷ್ಟ್ರಗಳಲ್ಲಿ ತಮ್ಮ ಶಿಕ್ಷಣ ಮುಂದುವರಿಸಿದರು.. ಆದ್ರೆ 2019 ರ ವೇಳೆಗೆ ಸುಮಾರು ಏಳು ಲಕ್ಷಕ್ಕೂ ಅಧಿಕ ಜನರು ತಮ್ಮ ಶಿಕ್ಷಣಕ್ಕಾಗಿ ಉದ್ದೇಶವನ್ನು ಆಯ್ಕೆಮಾಡಿಕೊಂಡಿದ್ದಾರೆ.. ಅಲ್ಲದೆ 2024ರ ವೇಳೆಗೆ ಈ ಸಂಖ್ಯೆ ಸುಮಾರು 1.8 ಬಿಲಿಯನ್ ದಾಟಲಿದೆ ಎಂದು ವರದಿಯೊಂದು ಮಾಹಿತಿ ನೀಡಿದೆ.
                              ಈ 4 ರಾಷ್ಟ್ರಗಳಲ್ಲಿ ಹೆಚ್ಚು ಭಾರತೀಯ ವಿದ್ಯಾರ್ಥಿ ಗಳು

               ಪ್ರಪಂಚದಾದ್ಯಂತ ಒಂದು 199 ರಾಷ್ಟ್ರಗಳು ಇದ್ದರೂ ಈ ನಾಲ್ಕು ರಾಷ್ಟ್ರಗಳಲ್ಲಿ ವಿದ್ಯಾಭ್ಯಾಸ ಮಾಡಲು ಭಾರತೀಯ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ತೋರುತ್ತಾರೆ.. ಅಮೆರಿಕ,ಇಂಗ್ಲೆಂಡ್, ಆಸ್ಟ್ರೇಲಿಯಾ, ಕೆನಡಾ ಭಾರತೀಯ ವಿದ್ಯಾರ್ಥಿಗಳು ತಮ್ಮ ಓದು ಮುಂದುವರಿಸಲು ಆಯ್ಕೆಮಾಡಿಕೊಳ್ಳುವ ಹಾಟ್ಸ್ಪಾಟ್ ಆಗಿದೆ..

                             ಕೆನಡಾ, ಆಸ್ಟ್ರೇಲಿಯಾಗಳಲ್ಲಿ ಹೆಚ್ಚಿನ ಭಾರತೀಯರು

              ಮೂಲವೊಂದರ ಪ್ರಕಾರ ಕೆನಡಾದಲ್ಲಿ ಎರಡು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು, ಅಮೆರಿಕಾದಲ್ಲಿ ಎರಡು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು, ಆಸ್ಟ್ರೇಲಿಯಾದಲ್ಲಿ 1.50 ಲಕ್ಷ ಭಾರತೀಯ ವಿದ್ಯಾರ್ಥಿಗಳು, ಹಾಗೂ ಇಂಗ್ಲೆಂಡ್ನಲ್ಲಿ ಸರಿಸುಮಾರು 27000 ಭಾರತೀಯ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನು ಮಾಡುತ್ತಿದ್ದಾರಂತೆ.. ಇದನ್ನು ಹೊರತುಪಡಿಸಿದರೆ ವಿಶ್ವದ ಅನೇಕ ರಾಷ್ಟ್ರಗಳಲ್ಲಿಯು ಸಹ ಭಾರತೀಯ ವಿದ್ಯಾರ್ಥಿಗಳು ತಮ್ಮ ಪ್ರಾಥಮಿಕ ಪ್ರೌಢ ಹಾಗೂ ಉನ್ನತ ಶಿಕ್ಷಣವನ್ನು ಮುಂದುವರೆಸಿದ್ದಾರೆ.

                      ವಿದೇಶದಲ್ಲಿ ಪಂಜಾಬ್ ವಿದ್ಯಾರ್ಥಿಗಳೇ ಹೆಚ್ಚು

        ಇನ್ನು ನಮ್ಮ ದೇಶದ ಪ್ರತಿಯೊಂದು ಮೂಲೆ ಮೂಲೆಯಿಂದ ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳು ಹೋಗಿದ್ದಾರೆ.. ಆದ್ರೆ ಎಲ್ಲ ರಾಜ್ಯಗಳಿಗೆ ಹೋಲಿಕೆ ಮಾಡಿಕೊಂಡರೆ ಪಂಜಾಬ್ನಿಂದ ಹೋಗಿ ವಿದೇಶಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಅಧಿಕವಾಗಿದೆ..

                                   ಬೇರೆ ಬೇರೆ ರಾಜ್ಯಗಳಿಂದ ವಿದೇಶಕ್ಕೆ ಪ್ರಯಾಣ

           2019ರಲ್ಲಿ ಸುಮಾರು 12% ವಿದ್ಯಾರ್ಥಿಗಳು ಆಂಧ್ರಪ್ರದೇಶ ಹಾಗೂ ಪಂಜಾಬ್ನಿಂದ ಹೋಗಿ ವಿದೇಶದಲ್ಲಿ ಓದುತ್ತಿದ್ದಾರೆ. ಇದನ್ನ ಹೊರತು ಪಡಿಸಿದರೆ ಗುಜರಾತ್ 8%, ಮಹಾರಾಷ್ಟ್ರ 11%, ಕರ್ನಾಟಕ 5%, ತಮಿಳುನಾಡು 7% ಹಾಗೂ ದೇಶದ ಇತರ ಭಾಗದ 4.5% ವಿದ್ಯಾರ್ಥಿಗಳು ವಿದೇಶದಲ್ಲಿ ತಮ್ಮ ಶಿಕ್ಷಣವನ್ನು ಮುಂದುವರೆಸಿದ್ದಾರೆ.
                        ವಿಶ್ವದ ಇತರೆ ರಾಷ್ಟ್ರಗಳ ಹಾಟ್ ಫೆವರಿಟ್ ಸ್ಥಳ ಅಮೆರಿಕ

                ಭಾರತ ಹೊರತುಪಡಿಸಿದರೆ ಏಷ್ಯಾ ಹಾಗೂ ವಿಶ್ವದ ಹಲವು ರಾಷ್ಟ್ರಗಳ ಜನರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನದಾಗಿ ಅಮೆರಿಕವನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಏಷ್ಯಾದ ಕೆಲವು ರಾಷ್ಟ್ರಗಳಾದ ಕತಾರ್‌, ಸಿರಿಯಾ ಮತ್ತು ಯೆಮನ್‌ ರಾಷ್ಟ್ರಗಳು ಕೆಲವೇ ವಿದ್ಯಾರ್ಥಿಗಳನ್ನು ಅಮೆರಿಕಕ್ಕೆ ಕಳುಹಿಸಿವೆ. ಆದರೆ ಕಾಂಬೋಡಿಯಾ ಮತ್ತು ಕಿರ್ಗಿಸ್ಥಾನ ಹೆಚ್ಚು ವಿದ್ಯಾರ್ಥಿಗಳನ್ನು ಅಮೆರಿಕಕ್ಕೆ ಕಳುಹಿಸಿವೆ. ವಿದೇಶಿಯರಲ್ಲಿ 6.71ಲಕ್ಷ (ಶೇ.49) ವಿದ್ಯಾರ್ಥಿನಿಯರು, 4.42 ಲಕ್ಷ ವಿದ್ಯಾರ್ಥಿಗಳು ಪದವಿ ಮತ್ತು ಸ್ನಾತಕೋತ್ತರ ಅಧ್ಯಯನದಲ್ಲಿ ತೊಡಗಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries