ನವದೆಹಲಿ: ಕೇಂದ್ರ ಸರ್ಕಾರ ಲಕ್ಷದ್ವೀಪ ಆಡಳಿತಾಧಿಕಾರಿ ಪ್ರಫುಲ್ ಕೆ ಪಟೇಲ್ ಅವರನ್ನು ದೆಹಲಿಯ ಮುಂದಿನ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕ ಮಾಡಲಾಗುತ್ತಿದೆಯೇ? ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ಟ್ವೀಟ್ ಮೂಲಕ ಪ್ರಶ್ನೆ ಮಾಡಿದ್ದಾರೆ.
"ಲಕ್ಷದ್ವೀಪದ ಆಡಳಿತಾಧಿಕಾರಿ ಪ್ರಫುಲ್ ಪಟೇಲ್ ಅವರನ್ನು ದೆಹಲಿಯ ಮುಂದಿನ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕ ಮಾಡಲಾಗುತ್ತಿದೆಯೇ?" ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.
ಅನಿಲ್ ಬೈಜಾಲ್ ಅವರು ಪ್ರಸ್ತುತ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಆಗಿದ್ದಾರೆ. 1969 ಬ್ಯಾಚ್‌ನ ಯುಟಿ ಕೇಡರ್ ಅಧಿಕಾರಿ ಬೈಜಾಲ್ ಅವರನ್ನು ಡಿಸೆಂಬರ್ 2016 ರಲ್ಲಿ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಿಸಲಾಯಿತು.
ಇನ್ನೂ ನರೇಂದ್ರ ಮೋದಿ ಮುಖ್ಯಮಂತ್ರಿಯಾಗಿದ್ದಾಗ ಗುಜರಾತ್‌ನ ಗೃಹ ಸಚಿವರಾಗಿ ಸೇವೆ ಸಲ್ಲಿಸಿದ ಪಟೇಲ್ ಅವರು, ಡಿಸೆಂಬರ್ 2020ರಲ್ಲಿ ಲಕ್ಷದ್ವೀಪ ಆಡಳಿತಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡರು.