ಮುಜಾಫರ್‌ನಗರ : ಭಾರತೀಯ ಕಿಸಾನ್ ಯೂನಿಯನ್ ಮುಖ್ಯಸ್ಥ ರಾಕೇಶ್ ಟಿಕಾಯತ್‌ಗೆ ಅಪರಿಚಿತ ವ್ಯಕ್ತಿಗಳಿಂದ ಕೊಲೆ ಬೆದರಿಕೆ ಕರೆ ಬಂದಿದೆ. ಈ ಸಂಬಂಧ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ಮಾಹಿತಿ ನೀಡಿದ್ದಾರೆ.
ಟಿಕಾಯತ್ ಅವರ ಕಾರು ಚಾಲಕ ಪ್ರಜ್ವಲ್ ತ್ಯಾಗಿ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಮುಜಾಫರ್‌ನಗರದ ಹಿರಿಯ ಪೊಲೀಸ್ ಅಧೀಕ್ಷಕ ಅಭಿಷೇಕ್ ಯಾದವ್ ಹೇಳಿದ್ದಾರೆ.
ಹಿರಿಯ ಸಬ್ ಇನ್ಸ್‌ಪೆಕ್ಟರ್ ರಾಕೇಶ್ ಶರ್ಮಾ ನೇತೃತ್ವದ ಪೊಲೀಸ್ ತಂಡವು ಟಿಕಾಯತ್ ಅವರ ನಿವಾಸಕ್ಕೆ ಭೇಟಿ ನೀಡಿ ಅವರಿಂದ ಮಾಹಿತಿ ಕಲೆ ಹಾಕಿದೆ ಎಂದೂ ಪೊಲೀಸರು ತಿಳಿಸಿದ್ದಾರೆ.