ಭುವನೇಶ್ವರ: ಬೆಂಗಳೂರಿನಿಂದ ಕೋಲ್ಕತ್ತಗೆ ಹೊರಟಿದ್ದ ವಿಮಾನದಲ್ಲಿ ಮಾರ್ಗ ಮಧ್ಯದಲ್ಲಿ ಪ್ರಯಾಣಿಕರೊಬ್ಬರು ಅಸ್ವಸ್ಥರಾದ ಕಾರಣ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ಪ್ರಯಾಣಿಕ ಸಾವಿಗೀಡಾಗಿರುವುದಾಗಿ ವರದಿಯಾಗಿದೆ.

ಭಾನುವಾರ ಏರ್ ಏಷಿಯಾ ವಿಮಾನವನ್ನು ಬಿಜು ಪಟ್ನಾಯಕ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತಾಗಿ ಇಳಿಸಲಾಗಿದೆ ಎಂದು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.