ಚಂಡೀಗಢ: ಪಂಜಾಬ್ ನ ಮಾಜಿ ಸಿಎಂ ಕ್ಯಾ.ಅಮರಿಂದರ್ ಸಿಂಗ್ ತಮ್ಮ ಭದ್ರಕೋಟೆಯಾಗಿದ್ದ ಪಾಟಿಯಾಲ ಅರ್ಬನ್ ಕ್ಷೇತ್ರದಿಂದ ಸೋಲು ಕಂಡಿದ್ದಾರೆ.
ಎರಡು ಅವಧಿಗೆ ಸಿಎಂ ಆಗಿದ್ದ ಅಮರಿಂದರ್ ಸಿಂಗ್ ಆಮ್ ಆದ್ಮಿ ಪಕ್ಷ (ಎಎಪಿ)ದ ತಮ್ಮ ಎದುರಾಳಿ ಅಜಿತ್ ಪಾಲ್ ಸಿಂಗ್ ಕೊಹ್ಲಿ ವಿರುದ್ಧ ಸೋಲು ಕಂಡಿದ್ದು 2017 ರಲ್ಲಿ ನಡೆದ ಚುನಾವಣೆಯಲ್ಲಿ ಅವರ ಗೆಲುವಿನ ಅಂತರ ಶೇ.49 ರಷ್ಟಿತ್ತು.
ಈಗ ಪಂಜಾಬ್ ನಲ್ಲಿ ಅಮರಿಂದರ್ ಸಿಂಗ್, ನವಜೋತ್ ಸಿಂಗ್ ಸಿಧು, ಸಿಎಂ ಚನ್ನಿ ಸೇರಿದಂತೆ ಘಟಾನುಘಟಿ ನಾಯಕರು ಸೋಲು ಅನುಭವಿಸಿದ್ದು ಆಮ್ ಆದ್ಮಿ ಪಕ್ಷ ಸ್ಪಷ್ಟ ಬಹುಮತ ಪಡೆದಿದೆ.
ಕಾಂಗ್ರೆಸ್ ತೊರೆದಿದ್ದ ಅಮರಿಂದರ್ ಸಿಂಗ್ ತಮ್ಮದೇ ಪಕ್ಷ ಸ್ಥಾಪಿಸಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದರು.