ತಿರುವನಂತಪುರ: ವಾಯುಭಾರ ಕುಸಿತವು ಅಸಾನಿ ಚಂಡಮಾರುತವಾಗಿ ಪರಿವರ್ತನೆಯಾಗಿರುವುದರಿಂದ ಕೇರಳದಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಅಂಡಮಾನ್ ಸಮುದ್ರದಲ್ಲಿ ಅತ್ಯಂತ ಕಡಿಮೆ ಒತ್ತಡ ಉಂಟಾಗಿದೆ. ಏತನ್ಮಧ್ಯೆ, ಅಸಾನಿ ಚಂಡಮಾರುತವು ಮ್ಯಾನ್ಮಾರ್ ಕರಾವಳಿ ತೀರಕ್ಕೆ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇದು ನಿರೀಕ್ಷೆಗಿಂತ ದುರ್ಬಲ ಚಂಡಮಾರುತವಾಗುವ ಸಾಧ್ಯತೆ ಇದೆ.
ಪ್ರಸ್ತುತ ವಾಯುಭಾರ ಕುಸಿತ ಪೋರ್ಟ್ ಬ್ಲೇರ್ ನಿಂದ ಸುಮಾರು 100 ಕಿ.ಮೀ.ದೂರದಲ್ಲಿ ಕೇಂದ್ರೀಕೃತವಾಗಿದೆ. ಮುಂದಿನ ನಾಲ್ಕು ದಿನಗಳ ಕಾಲ ಕೇರಳದಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕೋಝಿಕ್ಕೋಡ್, ಪಾಲಕ್ಕಾಡ್ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ.