ಕೋಝಿಕ್ಕೋಡ್: ಇಂಡಿಯನ್ ಯೂನಿಯನ್ ಮುಸ್ಲಿಮ್ ಲೀಗ್ ಪಾಣಕ್ಕಾಡ್ ನ ಕೇರಳ ರಾಜ್ಯಾಧ್ಯಕ್ಷ ಸಯ್ಯದ್ ಹೈದರ್ ಅಲಿ ಶಿಹಾಬ್ ತಂಙಳ್ (74) ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕೊಚ್ಚಿಯ ಅಂಗಮಾಲಿಯ ಖಾಸಗಿ ಆಸ್ಪತ್ರೆಯಲ್ಲಿ ಹಲವು ರೀತಿಯ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು.
ಸಯ್ಯದ್ ಹೈದರ್ ಶಿಹಾಬ್ ತಂಙಳ್ ಪಾರ್ಥಿವ ಶರೀರವನ್ನು ತವರು ಪ್ರದೇಶಕ್ಕೆ ಕೊಂಡೊಯ್ಯಲಾಗುತ್ತದೆ ಎಂದು ಐಯುಎಂಎಲ್ ನ ಹಿರಿಯ ಪದಾಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸಚಿವರಾದ ವಿ ಶಿವಂ ಕುಟ್ಟಿ ಹಾಗೂ ಸಾಜಿ ಚೆರಿಯನ್ ಐಯುಎಂಎಲ್ ನಾಯಕನ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.