ಕಾಸರಗೋಡು: ಸಾಮಾಜಿಕ ಅರಣ್ಯ ವಿಭಾಗವು ಮಾರ್ಚ್ 21 ರಂದು ಅರಣ್ಯ ಮತ್ತು ವನ್ಯಜೀವಿ ಇಲಾಖೆಯ ಆಶ್ರಯದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಅಂತರರಾಷ್ಟ್ರೀಯ ಅರಣ್ಯ ದಿನವನ್ನು ಆಚರಿಸಿತು. ಕಾಸರಗೋಡು ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣವೀರ್ ಚಂದ್ ಉದ್ಘಾಟಿಸಿದರು.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಿ.ಬಿಜು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾಸರಗೋಡು ವಿಭಾಗೀಯ ಅರಣ್ಯಾಧಿಕಾರಿ ಪಿ.ಧನೇಶ್ ಕುಮಾರ್, ಬ್ರಾಂಡ್ ಅಂಬಾಸಿಡರ್ ಅಬ್ದುಲ್ ಕರೀಂ ಮಾತನಾಡಿದರು. ಡಾ.ಗೋಪಾಲನ್ ಅವರು ಪ್ರಕೃತಿ ಸಂರಕ್ಷಣೆ ಕುರಿತು ಮಾತನಾಡಿದರು.