ಮಾಸ್ಕೊ: ಉಕ್ರೇನ್ ಮೇಲಿನ ದಾಳಿಯ ಕುರಿತು ಎರಡೂ ರಾಷ್ಟ್ರಗಳ ಮುಖ್ಯಸ್ಥರ ನಡುವೆ ಇದು ಎರಡನೇ ಬಾರಿಯ ಮಾತುಕತೆಯಾಗಿದೆ. ಪ್ರಧಾನಿ ಮೋದಿ ರಷ್ಯಾ ಅಧ್ಯಕ್ಷ ಪುಟಿನ್ ಅವರೊಂದಿಗೆ 50 ನಿಮಿಷಗಳ ಕಾಲ ಚರ್ಚೆ ನಡೆಸಿದರು.
ಅಧ್ಯಕ್ಷ ಝೆಲೆನ್ಸ್ಕಿ ಅವರೊಂದಿಗೆ ನೇರ ಮಾತುಕತೆ ನಡೆಸುವಂತೆ ಪ್ರಧಾನಿ ಮೋದಿ ಅಧ್ಯಕ್ಷ ಪುಟಿನ್ ಅವರನ್ನು ಒತ್ತಾಯಿಸಿದ್ದಾರೆ. ಉಕ್ರೇನ್‌ನ ಸುಮಿ ನಗರದಿಂದ ಭಾರತೀಯ ನಾಗರಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ಸಹಕಾರ ನೀಡುವುದಾಗಿ ಅಧ್ಯಕ್ಷ ಪುಟಿನ್ ಇದೇ ವೇಳೆ ಭರವಸೆ ನೀಡಿದ್ದಾರೆ. ರಷ್ಯಾದಿಂದ ಕದನ ವಿರಾಮ ಘೋಷಣೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷ ಪುಟಿನ್ ಅವರನ್ನು ಶ್ಲಾಘಿಸಿದರು. ಅಧ್ಯಕ್ಷ ಝೆಲೆನ್ಸ್ಕಿ ಅವರೊಂದಿಗೆ ನೇರ ಮಾತುಕತೆ ನಡೆಸುವಂತೆ ಪ್ರಧಾನಿ ಮೋದಿ ಅಧ್ಯಕ್ಷ ಪುಟಿನ್ ಅವರನ್ನು ಒತ್ತಾಯಿಸಿದ್ದಾರೆ.
ಇದಕ್ಕೂ ಮುನ್ನ ಪ್ರಧಾನಿ ಮೋದಿ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಅವರೊಂದಿಗೆ ಮಾತನಾಡಿದರು. ಸರ್ಕಾರದ ಉನ್ನತ ಮೂಲಗಳಿಂದ ಪಡೆದ ಮಾಹಿತಿಯ ಪ್ರಕಾರ, ರಷ್ಯಾ-ಉಕ್ರೇನ್ ಯುದ್ಧದ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಅವರೊಂದಿಗೆ ಸುದೀರ್ಘ ಚರ್ಚೆ ನಡೆಸಿದರು. 11.30ರ ಸುಮಾರಿಗೆ 35 ನಿಮಿಷಗಳ ಕಾಲ ಉಭಯ ರಾಷ್ಟ್ರಗಳ ಮುಖ್ಯಸ್ಥರ ನಡುವೆ ಮಾತುಕತೆ ನಡೆದಿದೆ.
ಪಿಎಂ ಮೋದಿ ಮತ್ತು ಅಧ್ಯಕ್ಷ ಜೆಲೆನ್ಸ್ಕಿ ಉಕ್ರೇನ್‌ನಲ್ಲಿ ಉದ್ಭವಿಸಿದ ಯುದ್ಧದ ಪರಿಸ್ಥಿತಿಯನ್ನು ಚರ್ಚಿಸಿದರು. ಅದರ ವಿಭಿನ್ನ ಆಯಾಮಗಳ ಬಗ್ಗೆ ಮಾತುಕತೆ ನಡೆಸಿದರು. ಮೂಲಗಳಿಂದ ಬಂದಿರುವ ಮಾಹಿತಿ ಪ್ರಕಾರ, ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ನೇರ ಮಾತುಕತೆಗೆ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಉಕ್ರೇನ್‌ನಿಂದ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸುವಲ್ಲಿ ಉಕ್ರೇನ್ ಸರ್ಕಾರ ನೀಡಿದ ನೆರವಿಗಾಗಿ ಪ್ರಧಾನಿ ಮೋದಿ ಅಧ್ಯಕ್ಷ ಝೆಲೆನ್ಸ್ಕಿ ಅವರಿಗೆ ಧನ್ಯವಾದ ಅರ್ಪಿಸಿದರು. ಸುಮಿಯಿಂದ ಭಾರತೀಯ ನಾಗರಿಕರನ್ನು ಸ್ಥಳಾಂತರಿಸಲು ಉಕ್ರೇನ್ ಸರ್ಕಾರದ ಬೆಂಬಲವನ್ನು ಪ್ರಧಾನಿ ಮೋದಿ ಕೋರಿದರು.