ಕೊಲಂಬೋ: ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಂಅಅ) ಅಧ್ಯಕ್ಷರಾಗಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರ ಅಧಿಕಾರಾವಧಿಯನ್ನು ಸರ್ವಾನುಮತದಿಂದ ಒಂದು ವರ್ಷಕ್ಕೆ ವಿಸ್ತರಿಸಲಾಗಿದೆ.
ಕೊಲಂಬೊದಲ್ಲಿ ಶನಿವಾರ ನಡೆದ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಂಅಅ) ಅಧ್ಯಕ್ಷರಾಗಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ (ಎಚಿಥಿ Shಚಿh) ಅವರ ಅಧಿಕಾರಾವಧಿಯನ್ನು ಸರ್ವಾನುಮತದಿಂದ ಒಂದು ವರ್ಷಕ್ಕೆ ವಿಸ್ತರಿಸಲಾಗಿದೆ.
ಷಾ ಕಳೆದ ವರ್ಷ ಜನವರಿಯಲ್ಲಿ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಅಧ್ಯಕ್ಷ ನಜ್ಮುಲ್ ಹಸನ್ ಅವರಿಂದ ಎಸಿಸಿಯ ಆಡಳಿತವನ್ನು ವಹಿಸಿಕೊಂಡಿದ್ದರು. ಶಾ ಅವರ ಅಧಿಕಾರ ವಿಸ್ತರಣೆಯನ್ನು ಶ್ರೀಲಂಕಾ ಕ್ರಿಕೆಟ್ (Sಐಅ) ಅಧ್ಯಕ್ಷ ಶಮ್ಮಿ ಸಿಲ್ವಾ ಸಭೆಯಲ್ಲಿ ಪ್ರಸ್ತಾಪಿಸಿದರು. ನಂತರ ಈ ನಾಮನಿರ್ದೇಶನವನ್ನು ಎಸಿಸಿಯ ಎಲ್ಲಾ ಸದಸ್ಯರು ಸರ್ವಾನುಮತದಿಂದ ಬೆಂಬಲಿಸಿದರು. ಈ ಹಿಂದೆ ಜಯ್ ಶಾ ಅವರನ್ನು ಎಸಿಸಿ ಅಧ್ಯಕ್ಷರನ್ನಾಗಿ ಕಳೆದ ವರ್ಷ ಜನವರಿ 30 ಶನಿವಾರದಂದು ಆಯ್ಕೆ ಮಾಡಲಾಗಿತ್ತು. ಷಾ ಅವರು ಈ ಹುದ್ದೆಗೆ ಅವಿರೋಧವಾಗಿ ಆಯ್ಕೆಯಾಗಿದ್ದರು. ಜೊತೆಗೆ ಈ ಹುದ್ದೆಗೇರಿದ ಅತ್ಯಂತ ಕಿರಿಯ ವ್ಯಕ್ತಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದರು.
ಅಧ್ಯಕ್ಷರಾಗಿ ಮರು ಆಯ್ಕೆಯಾದ ಬಳಿಕ ಮಾತನಾಡಿದ ಶಾ, ಎಸಿಸಿಯಲ್ಲಿನ ನನ್ನ ಗೌರವಾನ್ವಿತ ಸಹೋದ್ಯೋಗಿಗಳಿಗೆ ನನ್ನ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ಮತ್ತು ನಾವು ಪ್ರಾರಂಭಿಸಿದ ಎಲ್ಲಾ ಕೆಲಸವನ್ನು ಮುಂದುವರಿಸಲು ನಾನು ಅರ್ಹನೆಂದು ಪರಿಗಣಿಸಿದ್ದಕ್ಕಾಗಿ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ನಾನು ಈ ಗೌರವವನ್ನು ನಮ್ರತೆಯಿಂದ ಸ್ವೀಕರಿಸುತ್ತೇನೆ ಮತ್ತು ಏಷ್ಯಾದಲ್ಲಿ ನಮ್ಮ ಪ್ರೀತಿಯ ಕ್ರೀಡೆಯಾದ ಕ್ರಿಕೆಟ್ ಅನ್ನು ಸಂಘಟಿಸಲು, ಅಭಿವೃದ್ಧಿಪಡಿಸಲು ಮತ್ತು ಉತ್ತೇಜಿಸಲು ನಾನು ಶ್ರಮಿಸಲು ಬದ್ಧನಾಗಿದ್ದೇನೆ ಎಂದು ಹೇಳಿದ್ದಾರೆ.