ತಿರುವನಂತಪುರ: ರಾಜ್ಯದಲ್ಲಿ ಬೇಸಿಗೆ ಬಿಸಿಲಿನ ಝಳ ದಿನೇದಿನೇ ಹೆಚ್ಚಳಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಪಡಿತರ ಅಂಗಡಿಗಳ ವೇಳಾಪಟ್ಟಿಯನ್ನು ಮರುಹೊಂದಿಸಿದೆ. ಮಧ್ಯಾಹ್ನದ ಬಿಸಿಲಿನಿಂದ ಪಾರಾಗಲು ಪಡಿತರ ಅಂಗಡಿಗಳನ್ನು ಮಧ್ಯಾಹ್ನ 12ರಿಂದ ಸಂಜೆ 4ರವರೆಗೆ ಮುಚ್ಚಲಾಗುವುದು.
ಪಡಿತರ ಅಂಗಡಿಗಳು ಬೆಳಗ್ಗೆ 8 ರಿಂದ ಮಧ್ಯಾಹ್ನ 12 ರ ವರೆಗೆ ಮತ್ತು ಸಂಜೆ 4 ರಿಂದ 7 ರವರೆಗೆ ತೆರೆದಿರುತ್ತವೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜಿ.ಆರ್.ಅನಿಲ್ ಶನಿವಾರ ತಿಳಿಸಿದ್ದಾರೆ. ಕಾಸರಗೋಡು, ಪಾಲಕ್ಕಾಡ್ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಹಗಲಿನ ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಈ ನಿರ್ಧಾರ ಕೈಗೊಂಡಿದೆ.