ನವದೆಹಲಿ: 'ಸ್ವಾತಂತ್ರ್ಯ ಹೋರಾಟಕ್ಕೆ ಸ್ವಾಮಿ ದಯಾನಂದ ಸರಸ್ವತಿ, ಮಹರ್ಷಿ ಅರವಿಂದ ಹಾಗೂ ಸ್ವಾಮಿ ವಿವೇಕಾನಂದ ಅವರಂತಹ ಧಾರ್ಮಿಕ ಮುಖಂಡರ ಕೊಡುಗೆಯನ್ನು ಮರೆಯಲಾಗದು' ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಶನಿವಾರ ಹೇಳಿದ್ದಾರೆ.

ಅಹಮದಾಬಾದ್‌ನಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಆರ್‌ಎಸ್‌ಎಸ್‌ನ ವಾರ್ಷಿಕ ಸಮಾವೇಶದ ಹಿನ್ನೆಲೆಯಲ್ಲಿ ಅವರು ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.
'ಆರ್‌ಎಸ್‌ಎಸ್ ಸಂಸ್ಥಾಪಕ ಕೆ.ಬಿ.ಹೆಡಗೇವಾರ್ ಮಾರ್ಗದರ್ಶನದಲ್ಲಿ ಸಂಘದ ಕಾರ್ಯಕರ್ತರು ಕೂಡ ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡಿದ್ದರು' ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.
'ಸ್ವಾತಂತ್ರ್ಯ ಹೋರಾಟ ರಾಷ್ಟ್ರ ವ್ಯಾಪಿ ಚಳವಳಿ ಸ್ವರೂಪ ಪಡೆದಿತ್ತಲ್ಲದೇ, ಎಲ್ಲರನ್ನೂ ಒಳಗೊಂಡಿತ್ತು. ದೇಶದ ಅನೇಕ ಧಾರ್ಮಿಕ ಮುಖಂಡರ ನೇತೃತ್ವದಲ್ಲಿ ನಡೆದ ಈ ಹೋರಾಟ ಬ್ರಿಟಿಷರ ದಬ್ಬಾಳಿಕೆಗೆ ಪ್ರಬಲ ಪ್ರತಿರೋಧ ಒಡ್ಡುವಲ್ಲಿ ಯಶಸ್ವಿಯಾಗಿತ್ತು' ಎಂದೂ ಅವರು ಹೇಳಿದ್ದಾರೆ.