ಸಮರಸ ಚಿತ್ರಸುದ್ದಿ: ಕಾಸರಗೋಡು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ.ಸಿ.ಸೋಮಶೇಖರ್ ಅವರು ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯದ ನಿಸ್ವಾರ್ಥ ಕನ್ನಡ ಪರ ಚಟುವಟಿಕೆಗಳನ್ನು ಶ್ಲಾಘಿಸಿ ಸಂಸ್ಥೆಯ ಸ್ಥಾಪಕ ವಾಮನ್ ರಾವ್ ಬೇಕಲ್ ಅವರಿಗೆ ಡಾ.ಸಿ.ಸೋಮಶೇಖರ್ ಅವರು ಶಾಲು ಹೊದಿಸಿ, ಡಾ.ಸಿ.ಸೋಮಶೇಖರ್ ಅಭಿನಂದನಾ ಗ್ರಂಥ ನೀಡಿ ಗೌರವಿಸಿದರು. ಕಾರ್ಯಕ್ರಮದಲ್ಲಿ ಪ್ರಾಧಿಕಾರ ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ, ಸರ್ವಮಂಗಳ ಸೋಮಶೇಖರ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕಾಸರಗೋಡು ಜಿಲ್ಲಾ ಅಧ್ಯಕ್ಷ ಎ.ಆರ್.ಸುಬ್ಬಯ್ಯಕಟ್ಟೆ, ಪತ್ರಕರ್ತ ಪ್ರದೀಪ್ ಬೇಕಲ್, ಲೇಖಕ ರವಿ ನಾಯ್ಕಾಪು, ಕೇಶವ ಪ್ರಸಾದ್ ನಾಣಿತ್ತಿಲು, ಅಖಿಲೇಶ್ ಯಾದವ್ ನಗುಮುಗಂ ಮುಂತಾದವರಿದ್ದರು.