ನವದೆಹಲಿ: ವಿವೇಕ್ ರಂಜನ್ ಅಗ್ನಿಹೋತ್ರಿ ನಿರ್ದೇಶನದ 'ದಿ ಕಾಶ್ಮೀರ್ ಫೈಲ್ಸ್' ಕುರಿತು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಮೆಚ್ಚುಗೆ ವ್ಯಕ್ತಪಡಿಸಿದ್ದು, ಈ ಚಿತ್ರ ಭಾರತೀಯ ಚಿತ್ರರಂಗದಲ್ಲಿ ಹೊಸ ಮೆಲ್ಲಿಗಲ್ಲು ಸಾಧಿಸಲಿದೆ ಎಂದು ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, 'ನಿರ್ದೇಶಕ ಅಗ್ನಿಹೋತ್ರಿ ನಮ್ಮ ಆಧುನಿಕ ಇತಿಹಾಸದ ಕರಾಳ ಅಧ್ಯಾಯದ ಸೂಕ್ಷ್ಮ ಚಿತ್ರಣಗಳನ್ನು ಒಳಗೊಂಡ ಕಥೆಯನ್ನು ತೆರೆಯ ಮೇಲೆ ತರುವ ಮೂಲಕ ಕಾಶ್ಮೀರಿ ಪಂಡಿತರ ದುಸ್ಥಿತಿಗೆ ಸಂಪೂರ್ಣ ನ್ಯಾಯವನ್ನು ಒದಗಿಸುವ ಕೆಲಸ ಮಾಡಿದ್ದಾರೆ' ಎಂದು ಬರೆದುಕೊಂಡಿದ್ದಾರೆ.
ಈ ಸಿನಿಮಾ 1990ರ ದಶಕದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿನ ಕಾಶ್ಮೀರಿ ಪಂಡಿತರ ಒತ್ತಾಯದ ವಲಸೆ ಹಾಗೂ ಆ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳು, ಅನ್ಯಾಯವನ್ನು ಬಿಂಬಿಸುವ ಕಥಾ ಹಂದರವನ್ನು ಒಳಗೊಂಡಿದೆ.
ಕಳೆದ ವಾರ ಬಿಡುಗಡೆಯಾದ ಈ ಚಿತ್ರದಲ್ಲಿ ಅನುಪಮ್ ಖೇರ್, ಪುನೀತ್ ಇಸ್ಸರ್, ಮಿಥುನ್ ಚಕ್ರವರ್ತಿ, ದರ್ಶನ್ ಕುಮಾರ್, ಪಲ್ಲವಿ ಜೋಷಿ ನಟಿಸಿದ್ದಾರೆ.
ಈ ಚಿತ್ರಕ್ಕೆ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ದೇಶದಾದ್ಯಂತ ಉತ್ತಮ ಪ್ರದರ್ಶನ ಕಾಣುತ್ತಿದೆ.
ಕರ್ನಾಟಕ, ಮಧ್ಯಪ್ರದೇಶ, ಉತ್ತರ ಪ್ರದೇಶ ಸೇರಿದಂತೆ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಈ ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಲಾಗಿದೆ.