ತಿರುವನಂತಪುರ: ಭೂಸ್ವಾಧೀನ ವಿರೋಧಿಸಿ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದು, ಸಿಲ್ವರ್ ಲೈನ್ ಯೋಜನೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪುನರುಚ್ಚರಿಸಿದ್ದಾರೆ. ಸರ್ಕಾರ ಘೋಷಿಸಿದ ಯಾವುದೇ ಯೋಜನೆಗಳು ಕಾಗದದಲ್ಲಿ ಅಗಿರುವುದಿಲ್ಲ, ಏನೇ ಹೇಳಿದರೂ ಅನುಷ್ಠಾನಗೊಳಿಸಲಾಗುವುದು ಎಂದು ಪಿಣರಾಯಿ ವಿಜಯನ್ ಹೇಳಿದರು.
ಕೆ-ರೈಲ್ ಯೋಜನೆಗಾಗಿ ಭೂಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ರಾಜ್ಯದ ವಿವಿಧೆಡೆ ನಡೆಯುತ್ತಿರುವ ಪ್ರತಿಭಟನೆಗಳನ್ನು ಮುಖ್ಯಮಂತ್ರಿ ಟೀಕಿಸಿದರು. ಎಲ್ಲಾ ಪ್ರತಿಭಟನೆಗಳು ಅಭಿವೃದ್ಧಿ ವಿರುದ್ಧ ಎಂದು ಹೇಳಿದರು. ಪ್ರತಿಪಕ್ಷಗಳ ವಿರುದ್ಧವೂ ಮುಖ್ಯಮಂತ್ರಿ ವಾಗ್ದಾಳಿ ನಡೆಸಿದರು. ರಾಜ್ಯದ ಅಭಿವೃದ್ಧಿಯನ್ನು ಕಾಂಗ್ರೆಸ್ ವಿರೋಧಿಸುತ್ತಿದೆ ಎಂದು ಸಿಎಂ ಹೇಳಿದರು.
ಮುಖ್ಯಮಂತ್ರಿಗಳು ಕೆಎಸ್‌ಟಿಎ ರಾಜ್ಯ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.