ಗುವಾಹಟಿ: ಅಸ್ಸಾಂನಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಪ್ರಕ್ರಿಯೆಯನ್ನು ಪರಿಷ್ಕರಿಸಬೇಕು ಮತ್ತು ಈಗಾಗಲೇ ನಡೆದಿರುವುದನ್ನು ಮರು ಪರಿಶೀಲನೆಗೆ ಒಳಪಡಿಸಬೇಕು ಎಂದು ಅಲ್ಲಿನ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.
ಗುವಾಹಟಿ: ಅಸ್ಸಾಂನಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಪ್ರಕ್ರಿಯೆಯನ್ನು ಪರಿಷ್ಕರಿಸಬೇಕು ಮತ್ತು ಈಗಾಗಲೇ ನಡೆದಿರುವುದನ್ನು ಮರು ಪರಿಶೀಲನೆಗೆ ಒಳಪಡಿಸಬೇಕು ಎಂದು ಅಲ್ಲಿನ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.
ಭಾನುವಾರ ಇಲ್ಲಿ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 'ಎನ್‌ಆರ್‌ಸಿಯನ್ನು ಮತ್ತೆ ಜಾರಿ ಮಾಡಬೇಕೆಂದು ನಾವು ಆಗ್ರಹಿಸುತ್ತಿದ್ದೇವೆ. ಈ ಕುರಿತು ಆಲ್ ಅಸ್ಸಾಂ ಸ್ಟೂಡೆಂಟ್ಸ್ ಯೂನಿಯನ್‌ನಂತಹ ಸಂಘಟನೆಗಳ ಜೊತೆಗೆ ಮಾತುಕತೆ ನಡೆಸುತ್ತಿದ್ದೇವೆ' ಎಂದಿದ್ದಾರೆ.
ಬಾಂಗ್ಲಾದೇಶದ ಗಡಿಯಲ್ಲಿರುವ ಜಿಲ್ಲೆಗಳ ಶೇ 20ರಷ್ಟು ಮತ್ತು ರಾಜ್ಯದ ಇತರ ಜಿಲ್ಲೆಗಳ ಶೇ 10ರಷ್ಟು ಅರ್ಜಿಗಳನ್ನು ಮರುಪರಿಶೀಲನೆಗೆ ಒಳಪಡಿಸಬೇಕೆಂದು ಕೋರಿ ಅಸ್ಸಾಂನ ಬಿಜೆಪಿ ನೇತೃತ್ವದ ಸರ್ಕಾರವು ಈ ಹಿಂದೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.