ಕಾಸರಗೋಡು: ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ.ಸಿ.ಸೋಮಶೇಖರ್ ಹಾಗೂ ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ ಅವರಿಗೆ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ ಸ್ಥಾಪಕ ಅಧ್ಯಕ್ಷ ವಾಮನ್ ರಾವ್ ಬೇಕಲ್, ಕೋಶಾಧಿಕಾರಿ ಸಂಧ್ಯಾರಾಣಿ ಟೀಚರ್, ಕಾರ್ಯದರ್ಶಿ ಜಗದೀಶ್ ಕೂಡ್ಲು ಮತ್ತು ಪದಾಧಿಕಾರಿಗಳು ಸೇರಿ ಗೌರವಾರ್ಪಣೆ ನೀಡಿದರು.
ಇದೇ ಸಂದರ್ಭದಲ್ಲಿ ವಿಂಶತಿ ಆಚರಿಸುತ್ತಿರುವ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯದ ಕಾರ್ಯಕ್ರಮಗಳಲ್ಲಿ ಹಾಗೂ ಕನ್ನಡ ಭವನದ ಕನ್ನಡ ಕೈಂಕರ್ಯದಲ್ಲಿ ತೊಡಗಿಸಿಕೊಂಡ ಪದಾಧಿಕಾರಿಗಳಿಗೆ ಪ್ರಾಧಿಕಾರ ಅಧ್ಯಕ್ಷ ಡಾ.ಸಿ.ಸೋಮಶೇಖರ್ ಅವರು ಸ್ಮರಣಿಕೆ ನೀಡಿ ಗೌರವಿಸಿದರು.