ಕುಂಬಳೆ: ವಿವಿಧ ಹುದ್ದೆಗಳಲ್ಲಿ ಇರುವ ನೌಕರರು ತಮ್ಮ ಜವಾಬ್ದಾರಿಯ ಬಗ್ಗೆ ತಿಳಿದು ಕಾರ್ಯಚರಿಸಿದರೆ ಯಾವುದೇ ಸಮಸ್ಯೆ ಇಲ್ಲದೆ ನಿವೃತ್ತರಾಗಬಹುದು. ಈ ನಿಟ್ಟಿನಲ್ಲಿ ಮುಖ್ಯೋಪಾಧ್ಯಾಯರ ಸೇವಾ ಕರ್ತವ್ಯಗಳ ಕುರಿತು ತಿಳಿಯುವುದರೊಂದಿಗೆ ಹುದ್ದೆಯಲ್ಲಿ ಭಡ್ತಿ ಹೊಂದಲು ಬೇಕಾದ ಶಿಕ್ಷಣ ಇಲಾಖೆಯ ಪರೀಕ್ಷಾ ತಯಾರಿಗೆ ತರಬೇತಿ ನೀಡುವ ಅಧ್ಯಾಪಕರ ಸಂಘದ ಕಾರ್ಯ ಶ್ಲಾಘನೀಯ ಎಂದು ಕನ್ನಡ ಸಾಹಿತ್ಯ ಪರಿಷತ್ತು, ಕೇರಳ ಗಡಿನಾಡ ಘಟಕದ ಅಧ್ಯಕ್ಷ ಎಸ್. ವಿ ಭಟ್ ಅಭಿಪ್ರಾಯಪಟ್ಟರು.
ಇವರು ಬೀರಂತಬೈಲಿನಲ್ಲಿರುವ ಅಧ್ಯಾಪಕ ಭವನದಲ್ಲಿ ನಡೆದ ಕನ್ನಡ ಮಾಧ್ಯಮ ಶಾಲೆಗಳ ಅಧ್ಯಾಪಕರು ಮುಖ್ಯೋಪಾಧ್ಯಾಯರಾಗಿ ಭಡ್ತಿ ಹೊಂದಲು ಬೇಕಾದ ಶಿಕ್ಷಣ ಇಲಾಖೆಯ ಪರೀಕ್ಷೆಗೆ ಸಂಬಂಧಿಸಿ ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘ ಕಾಸರಗೋಡು ಇದರ ವತಿಯಿಂದ ಪರೀಕ್ಷಾ ತಯಾರಿಗೆ ನಡೆದ ತರಬೇತಿಯನ್ನು ಉದ್ಘಾಟಿಸಿ ಮಾತನಾಡಿದರು.
ಅಧ್ಯಕ್ಷತೆಯನ್ನು ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಕೇಂದ್ರ ಸಮಿತಿಯ ಅಧ್ಯಕ್ಷ ಶ್ರೀನಿವಾಸ ರಾವ್ ಪಿ. ಬಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕೇಂದ್ರ ಸಮಿತಿಯ ಅಧಿಕೃತ ವಕ್ತಾರÀ ರವೀಂದ್ರನಾಥ್ ಕೆ ಆರ್, ಮಂಜೇಶ್ವರ ಉಪಜಿಲ್ಲಾ ಸಮಿತಿಯ ಅಧ್ಯಕ್ಷ ೀ ಉಮೇಶ್ ಕೆ, ಕಾಸರಗೋಡು ಉಪಜಿಲ್ಲಾ ಸಮಿತಿಯ ಅಧ್ಯಕ್ಷ ವಿನೋದ್ ರಾಜ್ ಉಪಸ್ಥಿತರಿದ್ದರು. ಕೇಂದ್ರ ಸಮಿತಿಯ ಉಪಾಧ್ಯಕ್ಷ ಸುಕೇಶ್ ಎ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯಪ್ರಶಾಂತ್ ಪಾಲೆಂಗ್ರಿ ಸ್ವಾಗತಿಸಿ, ಕಾಸರಗೋಡು ಉಪಜಿಲ್ಲಾ ಸಮಿತಿಯ ಕಾರ್ಯದರ್ಶಿ ಬಾಬು ಕೆ ವಂದಿಸಿದರು. ಬಳಿಕ ಸಂಪನ್ಮೂಲ ವ್ಯಕ್ತಿ ಶ್ರೀನಿವಾಸ್ ರಾವ್ ಪಿ. ಬಿ ತರಬೇತಿ ನಡೆಸಿಕೊಟ್ಟರು. ಮಂಜೇಶ್ವರ ಉಪಜಿಲ್ಲಾ ಸಮಿತಿಯ ಕೋಶಾಧಿಕಾರಿ ಜೀವನ್ ಕುಮಾರ್ ಸಹಕರಿಸಿದರು. ಕಾಸರಗೋಡು ಜಿಲ್ಲೆಯ ವಿವಿಧ ಕನ್ನಡ ಮಾಧ್ಯಮ ಶಿಕ್ಷಕ - ಶಿಕ್ಷಕಿಯರು ಈ ತರಬೇತಿಯ ಸದುಪಯೋಗವನ್ನು ಪಡೆದರು. ಮುಂದಿನ ದಿನಗಳಲ್ಲಿ ಈ ತರಬೇತಿಯನ್ನು ಮುಂದುವರಿಸುವ ಯೋಜನೆಯನ್ನು ಕೈಗೊಳ್ಳಲಾಗಿದೆ.