ನವದೆಹಲಿ:ಮಕ್ಕಳ ಕಾರ್ಯಕ್ರಮದ ಸಂದರ್ಭ ಜಂಕ್ ಫುಡ್ಗಳ ಜಾಹೀರಾತನ್ನು ಪ್ರಸಾರ ಮಾಡದಂತೆ ಕೇಂದ್ರ ಮಹಿಳೆ ಹಾಗೂ ಮಕ್ಕಳ ಅಭಿವೃದ್ಧಿ ಸಚಿವಾಲಯ ಸಲಹೆ ನೀಡಿದೆ. ''ದಾರಿತಪ್ಪಿಸುವ ಜಾಹೀರಾತುಗಳು'' ಕುರಿತು ಕರಡು ಮಾರ್ಗಸೂಚಿಗಳನ್ನು ಚರ್ಚಿಸಿದ ಇತ್ತೀಚೆಗಿನ ಸಭೆಯಲ್ಲಿ ಈ ಕಲ್ಪನೆಯನ್ನು ಅಸ್ತಿತ್ವಕ್ಕೆ ತರಲಾಯಿತು.

ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ರೋಹಿತ್ ಕುಮಾರ್ ಅವರು ಅಧ್ಯಕ್ಷತೆ ವಹಿಸಿದ್ದ ಸಭೆಯಲ್ಲಿ ಗೃಹ ಸಚಿವಾಲಯ, ಆರೋಗ್ಯ ಸಚಿವಾಲಯ, ಮಾಹಿತಿ ಹಾಗೂ ಪ್ರಸಾರ ಸಚಿವಾಲಯ ಮತ್ತು ಗ್ರಾಹಕ ವ್ಯವಹಾರಗಳ ಸಚಿವಾಲಯ ಸೇರಿದಂತೆ ಹಲವು ಸಚಿವಾಲಯಗಳ ಅಧಿಕಾರಿಗಳು ಪಾಲ್ಗೊಂಡಿದ್ದರು. ಫೆಬ್ರವರಿ 17ರಂದು ನಡೆದ ಸಭೆಯಲ್ಲಿ ಮಕ್ಕಳ ಕಾರ್ಯಕ್ರಮದ ಸಂದರ್ಭ ಜಂಕ್ ಫುಡ್ಗಳನ್ನು ಪ್ರಚಾರ ಮಾಡುವ ಜಾಹೀರಾತುಗಳಿಗೆ ಅನುಮತಿ ನೀಡಬಾರದು ಎಂದು ಕೇಂದ್ರ ಮಹಿಳೆ ಹಾಗೂ ಮಕ್ಕಳ ಅಭಿವೃದ್ಧಿ ಸಚಿವಾಲಯದ ಅಧಿಕಾರಿಗಳು ಸಲಹೆ ನೀಡಿದ್ದರು ಎಂದು ಇಂಡಿಯನ್ ಎಕ್ಸ್ಪ್ರೆಸ್ಗೆ ತಿಳಿದು ಬಂದಿದೆ.
ಮಕ್ಕಳಲ್ಲಿ ಬೊಜ್ಜಿಗೆ ಕಾರಣವಾಗುವ ಅನಾರೋಗ್ಯಕರ ಜಂಕ್ ಫುಡ್ಗಳನ್ನು ಪ್ರಚಾರ ಮಾಡುವ ಜಾಹೀರಾತಿಗೆ ಅನುಮತಿ ನೀಡಬಾರದು ಎಂದು ಅಧಿಕಾರಿಗಳು ಪ್ರತಿಪಾದಿಸಿದ್ದಾರೆ. ದೇಶದ ಮಕ್ಕಳಲ್ಲಿ ಬೊಜ್ಜು ಹೆಚ್ಚುತ್ತಿದೆ ಎಂದು ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯ ಅಂಕಿ-ಅಂಶಗಳು ತೋರಿಸಿವೆ ಎಂದು ಅವರು ಹೇಳಿದ್ದಾರೆ.