ಕೊಚ್ಚಿ: ಸಿನಿಮಾ ಚಿತ್ರೀಕರಣ ಸ್ಥಳಗಳಲ್ಲಿ ಮಹಿಳೆಯರಿಗೆ ಭದ್ರತೆಗೆ ವ್ಯವಸ್ಥೆ ಮಾಡಬೇಕು ಎಂದು ಹೈಕೋರ್ಟ್ ನಿರ್ದೇಶನ ನೀಡಿದೆ. ಆ ಸ್ಥಳಗಳಲ್ಲಿ ಆಂತರಿಕ ದೂರು ನಿವಾರಣಾ ಸೆಲ್ ಸ್ಥಾಪಿಸುವಂತೆ ನ್ಯಾಯಾಲಯ ಆದೇಶಿಸಿದೆ. ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ಪೀಠ ಈ ತೀರ್ಪು ನೀಡಿದೆ. ಸಿನಿಮಾರಂಗದ ಮಹಿಳಾ ಗುಂಪು ಡಬ್ಲ್ಯುಸಿಸಿ ಪರವಾಗಿ ಹೈಕೋರ್ಟ್ ತೀರ್ಪು ನೀಡಿದೆ. ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್ ಸೂಚಿಸಿದೆ.
2018ರಲ್ಲಿ ನಟಿಯ ಮೇಲೆ ಹಲ್ಲೆ ನಡೆದ ನಂತರ ಡಬ್ಲ್ಯುಸಿಸಿ ಹೈಕೋರ್ಟ್ ಮೆಟ್ಟಿಲೇರಿತ್ತು.