ನವದೆಹಲಿ: ಪೂರ್ವ ಲಡಾಖ್ ಗಡಿ ವಿಚಾರಕ್ಕೆ ಸಂಬಂಧಿಸಿ ಭಾರತ ಮತ್ತು ಚೀನಾ ಮಧ್ಯೆ ಬಿಕ್ಕಟ್ಟು ಮುಂದುವರಿದಿರುವ ನಡುವೆಯೇ, ಚೀನಾದ ವಿದೇಶಾಂಗ ಸಚಿವರು ಶುಕ್ರವಾರ ಭಾರತದ ಆಗಮಿಸಲಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಆದರೆ, ಈ ವಿಚಾರದ ಕುರಿತು ಭಾರತ ಮತ್ತು ಚೀನಾ ಸರ್ಕಾರಗಳು ಅಧಿಕೃತವಾಗಿ ಖಚಿತಪಡಿಸಿಲ್ಲ.
ಇತ್ತೀಚೆಗೆ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರು ಪಾಕಿಸ್ತಾನದಲ್ಲಿ ಇಸ್ಲಾಮಿಕ್ ಸಹಕಾರ ಸಂಸ್ಥೆಯ ಸಮಾವೇಶದಲ್ಲಿ ಭಾಗಿಯಾಗಿದ್ದು, ದಕ್ಷಿಣ ಏಷ್ಯಾ ಪ್ರವಾಸದ ಭಾಗವಾಗಿ ಶುಕ್ರವಾರ ನೇಪಾಳಕ್ಕೆ ಬರಲಿದ್ದಾರೆ. ಇದೇ ವೇಳೆ ಭಾರತಕ್ಕೆ ಭೇಟಿ ನೀಡಲಿರುವ ಅವರು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ಭೇಟಿಯಾಗಲಿದ್ದಾರೆ ಎಂದು ಹೆಸರು ಹೇಳಲಿಚ್ಚಿಸದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದರೆ ಚೀನಾ ವಿದೇಶಾಂಗ ಸಚಿವರ ಈ ಭೇಟಿಯ ಉದ್ದೇಶವೇನು ಎಂಬುದು ತಿಳಿದುಬಂದಿಲ್ಲ. ಉಕ್ರೇನ್ ಬಿಕ್ಕಟ್ಟು ಬಗ್ಗೆ ಚರ್ಚೆ ನಡೆಯುವ ನಿರೀಕ್ಷೆ ಇದೆ ಎನ್ನಲಾಗಿದೆ.