ಕಾಸರಗೋಡು: ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಕಾಸರಗೋಡು ಪ್ರೆಸ್ ಕ್ಲಬ್ ವತಿಯಿಂದ'ಕಾಸರಗೋಡು: ಇಂದು-ನಾಳೆ'ಎಂಬ ವಿಷಯದಲ್ಲಿ ಸರಣಿ ಚರ್ಚಾ ಕಾರ್ಯಕ್ರಮ ಮಾ. 10ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾಧಿಕಾರಿ ಕಚೇರಿಯ ವಾರ್ತಾ ಇಲಾಖೆ ಸಭಾಂಗಣದಲ್ಲಿ ಜರುಗಲಿದೆ.
ಬಂದರು ಮತ್ತು ಪ್ರಾಚ್ಯವಸ್ತು ಖಾತೆ ಸಚಿವ ಅಹಮ್ಮದ್ ದೇವರ್‍ಕೋವಿಲ್ ಸಮಾರಂಭ ಉದ್ಘಾಟಿಸುವರು. ಸಂಸದ ರಾಜ್‍ಮೋಹನ್ ಉಣ್ಣಿತ್ತಾನ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಶಾಸಕರದ ಎ.ಕೆ.ಎಂ ಅಶ್ರಫ್, ಎನ್.ಎ ನೆಲ್ಲಿಕುನ್ನು. ಸಿ.ಎಚ್. ಕುಞಂಬು, ಇ.ಚಂದ್ರಶೇಖರನ್, ಎಂ. ರಾಜಗೋಪಾಲನ್, ಜಿಪಂ ಅಧ್ಯಕ್ಷೆ ಬೇಬಿ ಬಾಳಕೃಷ್ಣನ್, ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣವೀರ್‍ಚಂದ್ ಪಾಲ್ಗೊಳ್ಳುವರು.