ಕೊಚ್ಚಿ: ಕಲಮಸ್ಸೆರಿಯಲ್ಲಿ ನಿರ್ಮಾಣ ಕಾಮಗಾರಿ ವೇಳೆ ಭೂಕುಸಿತ ಸಂಭವಿಸಿ ನಾಲ್ವರು ಅನ್ಯ ರಾಜ್ಯ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಕೆಸರಿನಲ್ಲಿ ಸಿಲುಕಿದ್ದ ಆರು ಮಂದಿಯನ್ನು ರಕ್ಷಣಾ ಸಿಬ್ಬಂದಿ ರಕ್ಷಿಸಿದ್ದಾರೆ. ಅವರಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಮತ್ತೊಬ್ಬರು ಮಣ್ಣಿನಡಿ ಸಿಲುಕಿದ್ದಾರೆ ಎಂದು ತಿಳಿದು ಬಂದಿದೆ. ಆತನಿಗಾಗಿ ಶೋಧ ಕಾರ್ಯ ಪ್ರಗತಿಯಲ್ಲಿದೆ. ಪೊಲೀಸರು, ಶ್ವಾನದಳ ಹಾಗೂ ಅಗ್ನಿಶಾಮಕ ದಳದಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.