ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 1,761 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 688 ದಿನಗಳಲ್ಲೇ ಇದು ಅತಿ ಕಡಿಮೆ ಪ್ರಕರಣಗಳಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,30,07,841ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಇದೇ ಅವಧಿಯಲ್ಲಿ 127 ಜನರು ಸೋಂಕಿನಿಂದ ಸಾವಿಗೀಡಾಗಿದ್ದು, ಈವರೆಗಿನ ಮೃತರ ಸಂಖ್ಯೆ 5,16,479ಕ್ಕೆ ತಲುಪಿದೆ.
ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದ್ದು, ಸದ್ಯ 26,240 ಸಕ್ರಿಯ ಪ್ರಕರಣಗಳು ಮಾತ್ರ ಇವೆ.
ಒಟ್ಟು ಸೋಂಕಿತರ ಪೈಕಿ ಸಕ್ರಿಯ ಪ್ರಕರಣಗಳ ಪ್ರಮಾಣ ಶೇ 0.06ರಷ್ಟಿದ್ದರೆ, ದೇಶದ ಕೋವಿಡ್ ಚೇತರಿಕೆಯ ಪ್ರಮಾಣ ಶೇ 98.74ರಷ್ಟಾಗಿದೆ. ಕಳೆದ 24 ಗಂಟೆಗಳಲ್ಲಿ 1,562 ಜನರು ಗುಣಮುಖರಾಗಿದ್ದಾರೆ.
ದೈನಂದಿನ ಕೋವಿಡ್ ದೃಢ ಪ್ರಮಾಣ ಶೇ 0.41 ಆಗಿದೆ. ಮರಣ ಪ್ರಮಾಣ ಶೇ 1.20ರಷ್ಟಿದೆ.
24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 4,31,973 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಈವರೆಗೂ 78.26 ಕೋಟಿ ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಈವರೆಗೂ 181.21 ಕೋಟಿ ಡೋಸ್ ಕೋವಿಡ್ ಲಸಿಕೆಯನ್ನು ನೀಡಲಾಗಿದೆ.
ಇನ್ನೊಂದೆಡೆ ಮಹಾರಾಷ್ಟ್ರದಲ್ಲಿ 1,43,766, ಕೇರಳದಲ್ಲಿ 67,315, ಕರ್ನಾಟಕದಲ್ಲಿ 40,035, ತಮಿಳುನಾಡಿನಲ್ಲಿ 38,025, ದೆಹಲಿಯಲ್ಲಿ 26,146, ಉತ್ತರ ಪ್ರದೇಶದಲ್ಲಿ 23,492 ಮತ್ತು ಪಶ್ಚಿಮ ಬಂಗಾಳದಲ್ಲಿ ಈವರೆಗೆ 21,194 ಜನರು ಸೋಂಕಿನಿಂದ ಸಾವಿಗೀಡಾಗಿದ್ದಾರೆ.