ಕೊವೊವ್ಯಾಕ್ಸ್ ಲಸಿಕೆಯನ್ನು ತುರ್ತು ಸಂದರ್ಭಗಳಲ್ಲಿ ವಯಸ್ಕರಿಗೆ ನೀಡಲು ಕಳೆದ ಡಿಸೆಂಬರ್ 28 ರಂದು ಹಾಗೂ 12ರಿಂದ 17 ವಯಸ್ಸಿನವರಿಗೆ ನೀಡಲು ಮಾರ್ಚ್ 9ರಂದು ಭಾರತೀಯ ಔಷಧ ನಿಯಂತ್ರಕರು ಷರತ್ತುಬದ್ಧ ಅನುಮೋದನೆ ನೀಡಿದ್ದರು.
ಕೊವೊವ್ಯಾಕ್ಸ್ ಲಸಿಕೆಯನ್ನು ರಾಷ್ಟ್ರೀಯ ಲಸಿಕಾ ಅಭಿಯಾನದಲ್ಲಿ ಸೇರ್ಪಡೆಗೊಳಿಸಬೇಕೆಂದು ಕೋರಿ ಸೀರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸರ್ಕಾರ ಮತ್ತು ನಿಯಂತ್ರಣ ವ್ಯವಹಾರಗಳ ನಿರ್ದೇಶಕ ಪ್ರಕಾಶ್ ಕುಮಾರ್ ಸಿಂಗ್ ಅವರು ಈಚೆಗೆ ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಪತ್ರ ಬರೆದಿದ್ದರು.