ನವದೆಹಲಿ: ದೆಹಲಿಯ ಜಾಮಿಯಾ ನಗರದ ರೆಸ್ಟೋರೆಂಟ್ ನಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಕನಿಷ್ಠ 13 ಜನರು ಗಾಯಗೊಂಡಿದ್ದಾರೆ.
ವಿಷಯ ತಿಳಿದಾಕ್ಷಣ ಅಗ್ನಿಶಾಮಕ ವಾಹನಗಳು ಮತ್ತು ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯ ಮುಂದುವರೆದಿದೆ.
ಟಿಕೋನಾ ಪಾರ್ಕ್ ಪ್ರದೇಶದ ರೆಸ್ಟೋರೆಂಟ್ ನ ನೆಲಮಾಳಿಗೆಯಲ್ಲಿ ಸ್ಫೋಟ ಸಂಭವಿಸಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.