ಚೆನ್ನೈ: ಮಹೇಂದ್ರ ಸಿಂಗ್ ಧೋನಿ ಅಭಿಮಾನಿಗಳಿಗೆ ಸಂತಸದ ಸುದ್ದಿಯೊಂದು ಹೊರಬಿದಿದ್ದೆ. ಮತ್ತೆ ಅವರು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಕ್ಯಾಪ್ಟನ್ ಆಗಲಿದ್ದಾರೆ.
ರವೀಂದ್ರ ಜಡೇಜಾ ಸಿಎಸ್ ಕೆ ತಂಡದ ಕ್ಯಾಪ್ಟನ್ ಹುದ್ದೆಯನ್ನು ತೊರೆದು, ಪಂದ್ಯದ ಕಡೆಗೆ ಹೆಚ್ಚಿನ ಗಮನ ಹರಿಸಲು ನಿರ್ಧರಿಸಿದ್ದಾರೆ. ಇದರಿಂದಾಗಿ ತಂಡವನ್ನು ಮುನ್ನಡೆಸುವಂತೆ ಮಹೇಂದ್ರ ಸಿಂಗ್ ಅವರನ್ನು ಕೇಳಿಕೊಂಡಿದ್ದಾರೆ. ಈ ಮನವಿಯನ್ನು ಮಹೇಂದ್ರ ಸಿಂಗ್ ಧೋನಿ ಒಪ್ಪಿಕೊಂಡಿದ್ದು, ಜಡೇಜಾ ಪಂದ್ಯದ ಕಡೆಗೆ ಗಮನ ಹರಿಸಲು ಅವಕಾಶ ಮಾಡಿಕೊಟ್ಟಿದ್ದಾರೆ. ಇದನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಧಿಕೃತ ಟ್ವೀಟರ್ ಖಾತೆಯಲ್ಲಿ ತಿಳಿಸಲಾಗಿದೆ.
2008ರ ಐಪಿಎಲ್ ಆರಂಭದಿಂದಲೂ ಮಹೇಂದ್ರ ಸಿಂಗ್ ಧೋನಿ ಚೆನ್ನೈ ತಂಡದ ನಾಯಕರಾಗಿದ್ದರು. ಆದರೆ ಈ ಬಾರಿ ಧೋನಿ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರಿಂದ ರವೀಂದ್ರ ಜಡೇಜಾ ನಾಯಕತ್ವ ವಹಿಸಿಕೊಂಡಿದ್ದರು.