ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಮತ್ತಷ್ಟು ಇಳಿಕೆಯಾಗಿದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಕೇವಲ 861 ಹೊಸ ಪ್ರಕರಣಗಳು ಪತ್ತೆಯಾಗಿ 6 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ.
ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,30,36,132ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,21,691ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 11,058ಕ್ಕೆ ಇಳಿಕೆಯಾಗಿದೆ
ಈ ನಡುವೆ ಕಳೆದ 24 ಗಂಟೆಗಳಲ್ಲಿ 929 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,25,03,383ಕ್ಕೆ ತಲುಪಿದೆ.
ಭಾರತದಲ್ಲಿ ಒಂದೇ 4,18,345 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 79,38,47,740 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,85,74,18,827 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.