ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ದೇಶದ ಪ್ರತಿಯೊಬ್ಬ ಬಡವರಿಗೂ ಪಕ್ಕಾ ಮನೆ ಒದಗಿಸುವ ನಮ್ಮ ಸಂಕಲ್ಪದಲ್ಲಿ ನಾವು ಮಹತ್ವದ ಹೆಜ್ಜೆ ಇಟ್ಟಿದ್ದೇವೆ. ಜನರ ಸಹಕಾರದಿಂದಾಗಿ ಮೂರು ಕೋಟಿಗೂ ಹೆಚ್ಚು ಮನೆಗಳ ನಿರ್ಮಾಣ ಸಾಧ್ಯವಾಗಿದೆ. ಮೂಲ ಸೌಕರ್ಯಗಳನ್ನು ಹೊಂದಿರುವ ಈ ಮನೆಗಳು ಇಂದು ಮಹಿಳಾ ಸಬಲೀಕರಣದ ಸಂಕೇತವಾಗಿ ಮಾರ್ಪಟ್ಟಿವೆ ಎಂದು ಹೇಳಿದ್ದಾರೆ.
ಗ್ರಾಮೀಣ ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ 2.52 ಕೋಟಿ ಮನೆಗಳ ನಿರ್ಮಾಣ ಪೂರ್ಣಗೊಂಡಿದೆ. ಇದಕ್ಕಾಗಿ 1.95 ಲಕ್ಷ ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ನಗರ ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಇದುವರೆಗೆ 58 ಲಕ್ಷ ಮನೆಗಳನ್ನು ನಿರ್ಮಿಸಲಾಗಿದೆ.
ಈ ಉದ್ದೇಶಕ್ಕಾಗಿ 1.18 ಲಕ್ಷ ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ ಎಂದು ಪ್ರಧಾನಿ ಮೋದಿಯವರು ಮಾಹಿತಿ ನೀಡಿದ್ದಾರೆ.
ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ನಿರ್ಮಾಣವಾದ ಪ್ರತಿ ಮನೆಗೆ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಅನಿಲ ಸಂಪರ್ಕ, ನೀರಿನ ಸಂಪರ್ಕ ಮತ್ತು ವಿದ್ಯುತ್ ಸೇರಿದಂತೆ ಮೂಲಸೌಕರ್ಯಗಳನ್ನು ನೀಡಲಾಗುತ್ತದೆ.