ನವದೆಹಲಿ: 2017ರಿಂದ ಕೇಂದ್ರೀಯ ವಿಶ್ವವಿದ್ಯಾನಿಲಯಗಳ 24ಕ್ಕೂ ಅಧಿಕ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರದ ಸಹಾಯಕ ಸಚಿವ ರಾಜ್ಕುಮಾರ್ ರಂಜನ್ ಸಿಂಗ್ ಲೋಕಸಭೆಯಲ್ಲಿ ಸೋಮವಾರ ತಿಳಿಸಿದ್ದಾರೆ.
ನವದೆಹಲಿ: 2017ರಿಂದ ಕೇಂದ್ರೀಯ ವಿಶ್ವವಿದ್ಯಾನಿಲಯಗಳ 24ಕ್ಕೂ ಅಧಿಕ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರದ ಸಹಾಯಕ ಸಚಿವ ರಾಜ್ಕುಮಾರ್ ರಂಜನ್ ಸಿಂಗ್ ಲೋಕಸಭೆಯಲ್ಲಿ ಸೋಮವಾರ ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಮೇಲಿನ ತಾರತಮ್ಯ ಹಾಗೂ ಕಿರುಕುಳದ ಘಟನೆಗಳನ್ನು ತಡೆಯಲು ಕೇಂದ್ರ ಸರಕಾರ ಹಾಗೂ ವಿಶ್ವವಿದ್ಯಾನಿಲಯ ಅನುದಾನ ಆಯೋಗ (ಯುಜಿಸಿ) ಹಲವು ಉಪಕ್ರಮಗಳನ್ನು ತೆಗೆದುಕೊಂಡಿದೆ ಎಂದು ಅವರು ಹೇಳಿದ್ದಾರೆ.
2018 ನವೆಂಬರ್ನಿಂದ 2021 ಅಕ್ಟೋಬರ್ ನಡುವೆ ತೀರ್ಥಂಕರ ಮಹಾವೀರ ವಿಶ್ವವಿದ್ಯಾನಿಲಯ, ಮೊರದಾಬಾದ್, ಉತ್ತರಪದೇಶದಿಂದ ತಲಾ ಇಬ್ಬರು ವಿದ್ಯಾರ್ಥಿಗಳ ಆತ್ಮಹತ್ಯಾ ಪ್ರಕರಣಗಳು ವರದಿಯಾಗಿವೆ ಎಂದು ಯುಜಿಸಿ ಮಾಹಿತಿ ನೀಡಿದೆ ಎಂದು ಸಿಂಗ್ ತಿಳಿಸಿದ್ದಾರೆ. ವಿದ್ಯಾರ್ಥಿಗಳ ಹಿತಾಸಕ್ತಿ ರಕ್ಷಿಸಲು ವಿಶ್ವವಿದ್ಯಾನಿಲಯ ಅನುದಾನ ಆಯೋಗ (ವಿದ್ಯಾರ್ಥಿಗಳ ಸಮಸ್ಯೆ ಪರಿಹಾರ) 2019ರಲ್ಲಿ ನಿಯಮಗಳನ್ನು ರೂಪಿಸಿತ್ತು. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ರ್ಯಾಗಿಂಗ್ ಪಿಡುಗನ್ನು ತಡೆಗಟ್ಟಲು ಯುಜಿಸಿ ನಿಯಮಗಳನ್ನು ಅಧಿಸೂಚಿಸಿತ್ತು. ಅಲ್ಲದೆ, ನಿಯಮಗಳನ್ನು ಕಟ್ಟುನಿಟ್ಟಿನಿಂದ ಅನುಸರಿಸುವಂತೆ ಸುತ್ತೋಲೆ ಹೊಡಿಸಿತ್ತು ಎಂದು ಸಿಂಗ್ ತಿಳಿಸಿದ್ದಾರೆ.