ಹೈದರಾಬಾದ್: ಆಂಧ್ರಪ್ರದೇಶದ ಔಷಧ ಘಟಕದಲ್ಲಿ ಗುರುವಾರ ಮಧ್ಯರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಆರು ಮಂದಿ ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ.
ಹೈದರಾಬಾದ್: ಆಂಧ್ರಪ್ರದೇಶದ ಔಷಧ ಘಟಕದಲ್ಲಿ ಗುರುವಾರ ಮಧ್ಯರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಆರು ಮಂದಿ ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ.
ಅನಿಲ ಸೋರಿಕೆಯಿಂದ ರಿಯಾಕ್ಟರ್ ಸ್ಫೋಟಗೊಂಡಿರುವುದು ಬೆಂಕಿಗೆ ಕಾರಣ ಎಂದು ಶಂಕಿಸಲಾಗಿದೆ.
ಪಶ್ಚಿಮ ಗೋದಾವರಿ ಜಿಲ್ಲೆಯ ಅಕ್ಕಿರೆಡ್ಡಿಗುಡೆಂನಲ್ಲಿ ಈ ಘಟನೆ ನಡೆದಿದೆ. ಬೆಂಕಿ ಕಾಣಿಸಿಕೊಂಡಾಗ 18 ಕಾರ್ಮಿಕರು ಔಷಧೀಯ ಘಟಕದ 4 ನೇ ಘಟಕದಲ್ಲಿ ಕೆಲಸ ಮಾಡುತ್ತಿದ್ದರು.
ಎರಡು ಗಂಟೆಯಲ್ಲಿ ಬೆಂಕಿಯನ್ನು ಹತೋಟಿಗೆ ತರಲಾಯಿತು.
ಮೃತಪಟ್ಟ ಆರು ಮಂದಿಯಲ್ಲಿ ನಾಲ್ವರು ಬಿಹಾರದಿಂದ ವಲಸೆ ಬಂದ ಕಾರ್ಮಿಕರು. ಈವರೆಗೆ ಇಬ್ಬರ ಮೃತದೇಹಗಳು ಪತ್ತೆಯಾಗಿವೆ.
ಮೃತರನ್ನು ಉದುರುಪತಿ ಕೃಷ್ಣಯ್ಯ, ಬಿ. ಕಿರಣ್ ಕುಮಾರ್, ಕಾರು ರವಿ ದಾಸ್, ಮನೋಜ್ ಕುಮಾರ್, ಸುವಾಸ್ ರವಿ ದಾಸ್ ಹಾಗೂ ಹಬ್ದಾಸ್ ರವಿ ದಾಸ್ ಎಂದು ಗುರುತಿಸಲಾಗಿದೆ.
ಘಟನೆ ಬಗ್ಗೆ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ರೂ. 25 ಲಕ್ಷ ಪರಿಹಾರ ಘೋಷಿಸಿದ್ದಾರೆ.
ತೀವ್ರವಾಗಿ ಗಾಯಗೊಂಡವರಿಗೆ ತಲಾ ರೂ. 5 ಲಕ್ಷ ಹಾಗೂ ಸಣ್ಣಪುಟ್ಟ ಗಾಯಗಳಾದವರಿಗೆ ರೂ. 2 ಲಕ್ಷ ಪರಿಹಾರ ಘೋಷಿಸಿದರು.