ನವದೆಹಲಿ: ಕಲ್ಲಿದ್ದಲು ಕೊರತೆ ಮತ್ತು ದೇಶದಲ್ಲಿ ಹೆಚ್ಚುತ್ತಿರುವ ವಿದ್ಯುತ್ ಬಿಕ್ಕಟ್ಟು ಗಮನದಲ್ಲಿಟ್ಟುಕೊಂಡು, ಕಲ್ಲಿದ್ದಲು ಸಕಾಲದಲ್ಲಿ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರ 657 ಪ್ರಯಾಣಿಕ ರೈಲುಗಳ ಕಾರ್ಯಾಚರಣೆಯನ್ನು ರದ್ದುಗೊಳಿಸಲು ನಿರ್ಧರಿಸಿದೆ.
ಕಲ್ಲಿದ್ದಲು ಹೊತ್ತು ಸಾಗುವ ವ್ಯಾಗನ್ ಗಳಿಗಾಗಿ ಆದ್ಯತೆಯ ಮಾರ್ಗಗಳಲ್ಲಿ ಸಂಚರಿಸುವ ಮೇಲ್, ಎಕ್ಸ್ ಪ್ರೆಸ್ ಮತ್ತು ಪ್ಯಾಸೆಂಜರ್ ರೈಲು ಸೇರಿದಂತೆ ಒಟ್ಟು 657 ರೈಲುಗಳನ್ನು ರದ್ದುಗೊಳಿಸಲಾಗಿದೆ. ವ್ಯಾಗನ್ ಗಳ ವೇಗದ ಚಲನೆಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.
ಗೂಡ್ಸ್ ರೈಲುಗಳಲ್ಲಿ ನಿತ್ಯ 400ಕ್ಕೂ ಹೆಚ್ಚು ಕಲ್ಲಿದ್ದಲು ರೇಕ್ ಸಾಗಣೆ ಮಾಡಲಾಗ್ತಿದ್ದು, ಕಲ್ಲಿದ್ದಲು ಸಾಗಣೆಗೆ ಅನುಕೂಲವಾಗಲೆಂದು ರೈಲು ಸಂಚಾರ ರದ್ದುಗೊಳಿಸಲಾಗಿದೆ. ಥರ್ಮಲ್ ಪವರ್ ಘಟಕಗಳಲ್ಲಿ ಕಲ್ಲಿದ್ದಲು ಕೊರತೆ ನಿವಾರಣೆಗೆ ಈ ಕ್ರಮ ಕೈಗೊಳ್ಳಲಾಗಿದೆ.
ಈ ಕ್ರಮವು ತಾತ್ಕಾಲಿಕವಾಗಿದೆ ಮತ್ತು ಪರಿಸ್ಥಿತಿ ಸಾಮಾನ್ಯವಾದ ತಕ್ಷಣ ಪ್ರಯಾಣಿಕರ ಸೇವೆಗಳನ್ನು ಪುನಃಸ್ಥಾಪಿಸಲಾಗುತ್ತದೆ ಎಂದು ಭಾರತೀಯ ರೈಲ್ವೆಯ ಕಾರ್ಯನಿರ್ವಾಹಕ ನಿರ್ದೇಶಕ ಗೌರವ್ ಕೃಷ್ಣ ಬನ್ಸಾಲ್ ಅವರು ಹೇಳಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.