ಚೆನ್ನೈ: ಮದ್ರಾಸ್ ಐಐಟಿಯಲ್ಲಿ ಮತ್ತೆ ಕರೊನಾ ಪ್ರಕರಣ ದಾಖಲಾಗಿದೆ. 9 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ಇರುವುದು ದೃಢವಾಗಿದೆ.
ಚೆನ್ನೈ: ಮದ್ರಾಸ್ ಐಐಟಿಯಲ್ಲಿ ಮತ್ತೆ ಕರೊನಾ ಪ್ರಕರಣ ದಾಖಲಾಗಿದೆ. 9 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ಇರುವುದು ದೃಢವಾಗಿದೆ.
ಈ ಹಿನ್ನಲೆಯಲ್ಲಿ ಸಿಬ್ಬಂದಿ ಸೇರಿ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗೊಳಪಡಿಸಬೇಕೆಂದು ಆಡಳಿತ ಮಂಡಳಿ ಸೂಚಿಸಿದೆ.
ಸದ್ಯ ಸೋಂಕು ದೃಢಪಟ್ಟಿರುವ ವಿದ್ಯಾರ್ಥಿಗಳನ್ನು ಐಸೋಲೇಟೆಡ್ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಮ್ಮು,ನೆಗಡಿ ಹಾಗೂ ಜ್ವರ ಇರುವ ವಿದ್ಯಾರ್ಥಿಗಳನ್ನು ಏಪ್ರಿಲ್ 19 ರಂದು ಪರೀಕ್ಷೆಗೊಳಪಡಿಸಲಾಗಿತ್ತು. ಬುಧವಾರ 9 ವಿದ್ಯಾರ್ಥಿಗಳಿಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ.
ಸೋಂಕಿತರ ಸಂಪರ್ಕಕ್ಕೆ ಬಂದ 18 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ. ಪ್ರತಿಯೊಬ್ಬರಿಗೂ ಮಾಸ್ಕ್ ಕಡ್ಡಾಯ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಸೂಚಿಸಲಾಗಿತ್ತು ಎಂದು ಆಡಳಿತಾಧಿಕಾರಿ ರಾಧಾಕೃಷ್ಣನ್ ತಿಳಿಸಿದ್ದಾರೆ.