ಕೊರೊನಾದ ಮೊದಲ ಹಾಗೂ 2ನೇ ಅಲೆಯ ವೇಳೆ ಕೋವಿಡ್ ಸೋಂಕಿಗೆ ತುತ್ತಾಗಿ ಹಲವು ಅಭ್ಯರ್ಥಿಗಳು ಯುಪಿಎಸ್‌ಸಿ ಪರೀಕ್ಷೆ ಬರೆಯಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಎಲ್ಲಾ ಅಭ್ಯರ್ಥಿಗಳ ವಯೋಮಿತಿಯನ್ನು ಸಡಿಲಿಸುವ ಮೂಲಕ ಮತ್ತೊಂದು ಅವಕಾಶ ನೀಡಬೇಕೆಂಬ ಅಭ್ಯರ್ಥಿಗಳ ಕೋರಿಕೆಯನ್ನು ಸರ್ಕಾರ ಅನುಕಂಪದ ಆಧಾರದಲ್ಲಿ ಪರಿಗಣಿಸಬೇಕು ಎಂದು ಸಂಸದೀಯ ಸಮಿತಿಯೊಂದು ಸರ್ಕಾರಕ್ಕೆ ಶಿಫಾರಸು ಮಾಡಿತ್ತು.
ಕಳೆದ ವಾರವಷ್ಟೇ ಕೊರೊನಾ ಸೋಂಕಿನ ಕಾರಣಕ್ಕೆ ಯುಪಿಎಸ್‌ಸಿ ಪರೀಕ್ಷೆ ಬರೆಯಲು ಸಾಧ್ಯವಾಗದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಸ್ಪಷ್ಟವಾಗಿ ಹೇಳಿತ್ತು.