ನವದೆಹಲಿ/ಲಂಡನ್: ಇಂಗ್ಲೆಂಡ್ ಪ್ರಧಾನ ಮಂತ್ರಿ ಬೊರಿಸ್ ಜಾನ್ಸನ್(UK PM Boris Johnson) ಎರಡು ದಿನಗಳ ಭಾರತ ಭೇಟಿಗೆ ಗುಜರಾತ್ ನ ಅಹ್ಮದಾಬಾದ್ ಗೆ ಆಗಮಿಸಿದ್ದಾರೆ.
ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರ ಎರಡು ದಿನಗಳ ಭೇಟಿಯು ಪ್ರಸ್ತಾವಿತ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಹೊಸ ಉತ್ತೇಜನವನ್ನು ನೀಡಲಿದೆ. ಇಂಡೋ-ಪೆಸಿಫಿಕ್‌ನಲ್ಲಿ ಸಹಕಾರವನ್ನು ಹೆಚ್ಚಿಸುವುದು, ರಕ್ಷಣಾ ಸಂಬಂಧಗಳನ್ನು ಹೆಚ್ಚಿಸುವ ಉಭಯ ದೇಶಗಳು ಚರ್ಚೆ ನಡೆಸುವ ಸಾಧ್ಯತೆಯಿದೆ. ಬೊರಿಸ್ ಜಾನ್ಸನ್ ಅವರು ದೆಹಲಿಯಲ್ಲಿ ರಷ್ಯಾ ಮೇಲೆ ಉಕ್ರೇನ್ ದಾಳಿಗೆ ಯಾವ ರೀತಿ ಪ್ರತಿಕ್ರಿಯಿಸಬೇಕೆಂದು ಉಪನ್ಯಾಸ ನೀಡುವ ಸಾಧ್ಯತೆಯಿಲ್ಲ ಎಂದು ಹೇಳಲಾಗುತ್ತಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೊಂದಿಗಿನ(PM Narendra Modi) ಜಾನ್ಸನ್ ಅವರ ಮಾತುಕತೆಯ ಪ್ರಮುಖ ಅಂಶವು ಇಂಡೋ-ಪೆಸಿಫಿಕ್‌ನಲ್ಲಿನ ಪರಿಸ್ಥಿತಿಯ ಮೇಲೆ ಇರುತ್ತದೆ, ಈ ಪ್ರದೇಶದಲ್ಲಿ ಯಾವುದೇ ರೀತಿಯ ದಬ್ಬಾಳಿಕೆಯನ್ನು ಇಂಗ್ಲೆಂಡ್ ಪ್ರಬಲವಾಗಿ ವಿರೋಧಿಸುತ್ತದೆ. ಭಾರತವನ್ನು ರಕ್ಷಣಾ ಉತ್ಪಾದನೆಯ ಕೇಂದ್ರವನ್ನಾಗಿ ಮಾಡುವ ಮೋದಿಯವರ ದೃಷ್ಟಿಯನ್ನು ಸಾಕಾರಗೊಳಿಸಲು ಯುಕೆ ತನ್ನ ಸಹಕಾರವನ್ನು ವಿಸ್ತರಿಸಲು ಸಿದ್ಧವಾಗಿದೆ. ಮಿಲಿಟರಿ ಯಂತ್ರಾಂಶದ ಜಂಟಿ ಉತ್ಪಾದನೆಗೆ ತಂತ್ರಜ್ಞಾನಗಳ ವರ್ಗಾವಣೆಗೆ ದೇಶವು ಸಿದ್ಧವಾಗಿದೆ.