ನವದೆಹಲಿ: ಪೂರ್ವ ದೆಹಲಿಯಲ್ಲಿ ಸ್ಥಳೀಯ ಬಿಜೆಪಿ ನಾಯಕನನ್ನು ಬುಧವಾರ ಸಂಜೆ ಗುಂಡಿಕ್ಕಿ ಹತ್ಯೆ ಮಾಡಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಮೃತ ಬಿಜೆಪಿ ಮುಖಂಡ ಜಿತು ಚೌಧರಿ ಎಂದು ಗುರುತಿಸಲಾಗಿದೆ. 42 ವರ್ಷದ ಜಿತು ಚೌಧರಿ ದೇಹದ ಮೇಲೆ ಗುಂಡೇಟಿನ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೂರ್ವ ದೆಹಲಿಯ ಮಯೂರ್ ವಿಹಾರ್ 3ನೇ ಹಂತದಲ್ಲಿರುವ ಅವರ ಮನೆಯ ಮುಂದೆ ರಕ್ತದ ಮಡುವಿನಲ್ಲಿದ್ದ ಬಿಜೆಪಿ ನಾಯಕನ ಶವವನ್ನು ಪೊಲೀಸ್ ಪೇದೆಯೊಬ್ಬರು ಗುರುತಿಸಿದ್ದಾರೆ. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಬರುವಷ್ಟರಲ್ಲಿ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.
ಆರೋಪಿಗಳು ಪರಾರಿಯಾಗಿದ್ದಾರೆ. ಅಪರಾಧ ನಡೆದ ಸ್ಥಳದಲ್ಲಿ ಕೆಲವು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಎಂದು ಪೊಲೀಸರು ತಿಳಿಸಿದ್ದಾರೆ.