ಕಾಸರಗೋಡು: ವಿಶ್ವ ಆರೋಗ್ಯ ದಿನಾಚರಣೆಯ ಅಂಗವಾಗಿ ಜಿಲ್ಲಾ ವೈದ್ಯಕೀಯ ಕಛೇರಿ (ಆರೋಗ್ಯ) ಜಂಟಿಯಾಗಿ ರಾಷ್ಟ್ರೀಯ ಆರೋಗ್ಯ ಮಿಷನ್ ನ ಸಂಯುಕ್ತ ಆಶ್ರಯದಲ್ಲಿ ಆರೋಗ್ಯ ಕಾರ್ಯಕರ್ತರಿಗಾಗಿ ಭಾಷಣ ಸ್ಪರ್ಧೆ ಮತ್ತು ಜಾಗೃತಿ ವಿಚಾರ ಸಂಕಿರಣವನ್ನು ಆಯೋಜಿಸಿತ್ತು.
ಕಾಞಂಗಾಡು ನಗರಸಭೆ ಅಧ್ಯಕ್ಷೆ ಕೆ.ವಿ.ಸುಜಾತ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾಸರಗೋಡು ಜಿಲ್ಲಾ ಪಂಚಾಯತ್ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಅಡ್ವ. ಸರಿತಾ ಎಸ್.ಎನ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ವೈದ್ಯಾಧಿಕಾರಿ (ಆರೋಗ್ಯ) ಡಾ.ಎ.ವಿ.ರಾಮದಾಸ್ ದಿನಾಚರಣೆಯ ಸಂದೇಶ ನೀಡಿದರು. ಕಾಞಂಗಾಡು ಜಿಲ್ಲಾ ಆಸ್ಪತ್ರೆಯ ಅಧೀಕ್ಷಕ ಡಾ.ಕೆ.ವಿ.ಪ್ರಕಾಶ್ ಮತ್ತು ಜಿಲ್ಲಾ ವಿಬಿಡಿ ನಿಯಂತ್ರಣಾಧಿಕಾರಿ ವಿ. ಸುರೇಶ, ತಾಂತ್ರಿಕ ಸಹಾಯಕ ಚಾಕೊ.ಸಿ.ಕೆ ಹಾಗೂ ಜಿಲ್ಲಾ ಶಿಕ್ಷಣ ಮತ್ತು ಮಾಧ್ಯಮ ಅಧಿಕಾರಿ ಅಬ್ದುಲ್ ಲತೀಫ್ ಮಠತ್ತಿಲ್ ಮಾತನಾಡಿದರು. ಉಪ ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ಟಿ.ಮನೋಜ್ ಸ್ವಾಗತಿಸಿ, ಉಪ ಜಿಲ್ಲಾ ಶಿಕ್ಷಣ ಮತ್ತು ಮಾಧ್ಯಮ ಅಧಿಕಾರಿ ಎಸ್. ಸಯನಾ ವಂದಿಸಿದರು.
ನೆಹರು ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ತರಗತಿಯಲ್ಲಿ ಕೋವಿಡ್ ನಿಯಂತ್ರಣ ಸೆಲ್ ನೋಡಲ್ ಅಧಿಕಾರಿ ಡಾ.ದಲ್ಮಿತಾ ನಿಯಾ ಜೇಮ್ಸ್ ವಿಷಯ ಮಂಡಿಸಿದರು. ಕ್ಷೇತ್ರ ಸಿಬ್ಬಂದಿ, ಎನ್‍ಎಚ್‍ಎಂ ಸಿಬ್ಬಂದಿ ಮತ್ತು ಇತರ ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ವಿವಿಧ ವಿಷಯಗಳಲ್ಲಿ ಡಾ. ಅಶ್ವಿನಿ, ಕಾತ್ರ್ಯಾಯಿನಿ ಎಂ, ಶಿಜಿಶೇಖರ್, ಬೇಬಿ ಎಲ್, ವಿಜೇತರಾದರು.