ನವದೆಹಲಿ: ಸರ್ಕಾರಿ ಶಾಲೆಗಳಲ್ಲಿ ಕೆಲ ಶಿಕ್ಷಕರು ವಿಶೇಷ ಆಸಕ್ತಿವಹಿಸಿ ಉತ್ತಮ ಪಾಠ ಮಾಡುವ ಮೂಲಕ ವಿದ್ಯಾರ್ಥಿಗಳನ್ನು ಹಿಡಿದಿಟ್ಟುಕೊಳ್ಳುತ್ತಾರೆ. ಆ ಮೂಲಕ ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಆಸಕ್ತಿ ತುಂಬುತ್ತಾರೆ.
ನವದೆಹಲಿ: ಸರ್ಕಾರಿ ಶಾಲೆಗಳಲ್ಲಿ ಕೆಲ ಶಿಕ್ಷಕರು ವಿಶೇಷ ಆಸಕ್ತಿವಹಿಸಿ ಉತ್ತಮ ಪಾಠ ಮಾಡುವ ಮೂಲಕ ವಿದ್ಯಾರ್ಥಿಗಳನ್ನು ಹಿಡಿದಿಟ್ಟುಕೊಳ್ಳುತ್ತಾರೆ. ಆ ಮೂಲಕ ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಆಸಕ್ತಿ ತುಂಬುತ್ತಾರೆ.
ಇದೇ ರೀತಿ ದೆಹಲಿಯ ಸರ್ಕಾರಿ ಶಾಲೆಯ ಶಿಕ್ಷಕಿಯೊಬ್ಬರು ತರಗತಿಯಲ್ಲಿ ಪಾಠ ಮಾಡುವಾಗ ವಿದ್ಯಾರ್ಥಿನಿ ಜೊತೆ ಸಖತ್ ಡ್ಯಾನ್ಸ್ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.
ಇಂಗ್ಲಿಷ್ ಶಿಕ್ಷಕಿ ಮನು ಗುಲಾಟಿ ಎನ್ನುವರು ತರಗತಿಯಲ್ಲಿ ಪಾಠ ಮಾಡುವಾಗ ಹರ್ಯಾಣಿ ಹಾಡಿಗೆ ಡ್ಯಾನ್ಸ್ ಮಾಡಲು ಹೇಳುತ್ತಾರೆ. ಈ ವೇಳೆ ಬಾಲಕಿ ನೃತ್ಯ ಮಾಡಲು ಆರಂಭಿಸಿದಾಗ ಇತರೆ ವಿದ್ಯಾರ್ಥಿನಿಯರು 'ಮ್ಯಾಮ್ ನೀವು ಕೂಡ ಮಾಡಿ' ಎನ್ನುತ್ತಾರೆ. ಈ ವೇಳೆ ಮನು ಅವರು ಬಾಲಕಿ ಜೊತೆ ನೃತ್ಯವನ್ನು ಮಾಡಿದ್ದಾರೆ.
ಈ ವಿಡಿಯೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಮನು ಅವರು, ವಿದ್ಯಾರ್ಥಿಗಳು ಶಿಕ್ಷಕರಾಗಲು ಇಷ್ಟಪಡುತ್ತಾರೆ ಎಂದು ಹೇಳಿಕೊಂಡಿದ್ದಾರೆ.
ಮನು ಅವರ ಈ ಪ್ರಯತ್ನಕ್ಕೆ ನೆಟ್ಟಿಗರು ಸಾಕಷ್ಟು ಪ್ರಶಂಸೆ ವ್ಯಕ್ತಪಡಿಸಿದ್ದು, ಈ ರೀತಿಯ ಶಿಕ್ಷಕರು ವಿದ್ಯಾರ್ಥಿಗಳೊಡನೆ ಸುಮಧುರ ಬಾಂಧವ್ಯ ಸೃಷ್ಟಿಸಲು ಕಾರಣವಾಗುತ್ತಾರೆ ಎಂದು ಹೇಳಿದ್ದಾರೆ.