ಕಾಸರಗೋಡು: ಭಾರತೀಯ ಜನತಾ ಪಕ್ಷದ 43ನೇ ಸಂಸ್ಥಾಪನಾ ದಿನವನ್ನು ಪಕ್ಷದ ಕಾಸರಗೋಡು ಜಿಲ್ಲಾ ಸಮಿತಿ ವತಿಯಿಂದ ಪಕ್ಷದ ಕಚೇರಿಯಲ್ಲಿ ಆಚರಿಸಲಾಯಿತು. ಬಿಜೆಪಿ ಜಿಲ್ಲಾ ಸಮಿತಿ ಅಧ್ಯಕ್ಷ ರವೀಶ ತಂತ್ರಿ ಕುಂಟಾರು ಧ್ವಜಾರೋಹಣ ನಡೆಸಿದರು.
ಮುಖಂಡರಾದ ಎ.ವೇಲಾಯುಧನ್, ಕೋಳಾರು ಸತೀಶ್ಚಂದ್ರ ಭಂಡಾರಿ. ಕೆ. ರಾಮಪ್ಪ, ಸವಿತಾ ಟೀಚರ್, ಪುಷ್ಪಾ ಅಮೆಕ್ಕಳ, ಎ.ಕೆ ಕಯ್ಯಾರ್ ಮುಂತಾದವರು ಉಪಸ್ಥಿತರಿದ್ದರು. ಈ ಸಂದರ್ಭ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಕಾರ್ಯಕರ್ತರನ್ನು ಉದ್ದೇಶಿಸಿ ನಡೆಸಿದ ಭಾಷಣದ ನೇರಪ್ರಸಾರವನ್ನು ಜಿಲ್ಲಾ ಕಚೇರಿಯಲ್ಲಿ ನಡೆಸಲಾಯಿತು. ಜಿಲ್ಲೆಯ ಮಂಡಲ, ಪಂಚಾಯಿತಿ ಹಾಗೂ ಬೂತ್ ಮಟ್ಟದಲ್ಲಿ ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು. ರಾಜ್ಯ ಸಮಿತಿ ಅಧ್ಯಕ್ಷ ಕೆ. ಸಉರೇಂದ್ರನ್ ಅವರು ತಿರುವನಂತಪುರದ ರಾಜ್ಯ ಸಮಿತಿ ಕಚೇರಿಯಲ್ಲಿ ಧ್ವಜಾರೋಹಣ ನಡೆಸಿದರು.