ನವದೆಹಲಿ: 'ಆಮ್ ಆದ್ಮಿ ಪಕ್ಷ ಬೇರ ಪಕ್ಷಗಳ ರೀತಿ ಟೊಳ್ಳು ಭರವಸೆಗಳನ್ನು ಕೊಡುವುದಿಲ್ಲ' ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ಹೇಳಿದ್ದಾರೆ.
ನವದೆಹಲಿ: 'ಆಮ್ ಆದ್ಮಿ ಪಕ್ಷ ಬೇರ ಪಕ್ಷಗಳ ರೀತಿ ಟೊಳ್ಳು ಭರವಸೆಗಳನ್ನು ಕೊಡುವುದಿಲ್ಲ' ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ಹೇಳಿದ್ದಾರೆ.
ಪಂಜಾಬ್‌ನಲ್ಲಿ 300 ಯುನಿಟ್‌ವರೆಗೆ ಉಚಿತ ವಿದ್ಯುತ್ ನೀಡುವುದಾಗಿ ಅಲ್ಲಿನ ಸರ್ಕಾರ ಘೋಷಿಸಿದ ಬೆನ್ನಲ್ಲೇ ಅರವಿಂದ್ ಕೇಜ್ರಿವಾಲ್ ಟ್ವಿಟರ್‌ನಲ್ಲಿ ಈ ಹೇಳಿಕೆ ಕೊಟ್ಟಿದ್ದಾರೆ.
'ಪಂಜಾಬ್‌ನಲ್ಲಿ ಆಮ್ ಆದ್ಮಿ ಸರ್ಕಾರ ಭ್ರಷ್ಟಾಚಾರವನ್ನು ಮಟ್ಟಹಾಕಿ ಹಣ ಉಳಿಸುತ್ತದೆ. ಈ ಮೂಲಕ ಅಭಿವೃದ್ಧಿಪರ, ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುವುದು' ಎಂದಿದ್ದಾರೆ.
'ಆಪ್ ತಾನು ಏನು ಹೇಳುತ್ತದೆ ಅದನ್ನೇ ಮಾಡುತ್ತದೆ, ಬೇರೆ ಪಕ್ಷಗಳ ರೀತಿ ಹುಸಿ ಭರವಸೆಗಳನ್ನು ನಾವು ನೀಡುವುದಿಲ್ಲ' ಎಂದು ಕೇಜ್ರಿವಾಲ್ ಹೇಳಿದ್ದಾರೆ. ಅಲ್ಲದೇ ಉಚಿತ ವಿದ್ಯುತ್ ನೀಡುವುದಾಗಿ ಘೋಷಣೆ ಮಾಡಿರುವ ಪಂಜಾಬ್ ಸಿಎಂ ಭಗವಂತ್ ಮಾನ್‌ರನ್ನು ಅಭಿನಂದಿಸಿದ್ದಾರೆ.
ಪಂಜಾಬ್‌ನಲ್ಲಿ 300 ಯುನಿಟ್‌ವರೆಗೆ ಉಚಿತ ವಿದ್ಯುತ್ ನೀಡುವುದಾಗಿ ಘೋಷಿಸಿ, ವಾಣಿಜ್ಯ ಬಳಕೆಯ ವಿದ್ಯುತ್ ದರದಲ್ಲಿ ಯಾವುದೇ ಹೆಚ್ಚಳವನ್ನು ಭಗವಂತ್ ಮಾನ್ ಅವರು ಮಾಡಿಲ್ಲ. ಪಂಜಾಬ್ ಚುನಾವಣೆಗೂ ಮುನ್ನ ಉಚಿತ ವಿದ್ಯುತ್ ನೀಡುವುದಾಗಿ ಆಮ್ ಆದ್ಮಿ ಪಕ್ಷ ಭರವಸೆ ನೀಡಿತ್ತು.